ರಾಜ್ಯ ಮಟ್ಟದಲ್ಲಿ ತೃತೀಯ ಸ್ಥಾನ

Must Read

ಜಮಖಂಡಿ: ೨೦೨೫-೨೬ನೇ ಸಾಲಿನ ಶಾಲಾ ಬಾಲಕ ಮತ್ತು ಬಾಲಕಿಯರ ರಾಜ್ಯ ಮಟ್ಟದ ಈಜು ಸ್ಪರ್ಧೆಯ ಬಾಲಕರ ವಿಭಾಗದ ೫೦ ಮೀ ಮತ್ತು ೧೦೦ ಮೀ ಬಟರ್‌ಫ್ಲೈ ಸ್ಪರ್ಧೆಯಲ್ಲಿ ಸ್ಥಳೀಯ ಬಸವಜ್ಯೋತಿ ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆಯ ಪೃಥ್ವೀರಾಜ ಹಿರೇಮಠ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಪ್ರಾಚಾರ್ಯ ಡಾ.ಟಿ.ಪಿ. ಗಿರಡ್ಡಿ ತಿಳಿಸಿದ್ದಾರೆ.

ಶಾಲಾ ಶಿಕ್ಷಣ ಇಲಾಖೆಯ ಮೈಸೂರು ಜಿಲ್ಲಾ ಉಪನಿರ್ದೇಶಕರ ಕಚೇರಿಯ ಆಶ್ರಯದಲ್ಲಿ ನ.೮ ಮತ್ತು ನ.೯ ರಂದು ಮೈಸೂರಿನ ಯುನಿವರ್ಸಿಟಿ ಸ್ವೀಮಿಂಗ್ ಫೂಲ್‌ನಲ್ಲಿ ನಡೆದ ಈಜು ಮತ್ತು ಡೈವಿಂಗ್ ಸ್ಪರ್ಧೆಯಲ್ಲಿ ಅವರು ಈ ಸಾಧನೆ ಮಾಡಿದ್ದಾರೆ.

ವಿದ್ಯಾರ್ಥಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ.ಗಿರೀಶ ಕಡ್ಡಿ, ಆಡಳಿತಾಧಿಕಾರಿ ಪ್ರೊ,ಬಸವರಾಜ ಕಡ್ಡಿ ಹಾಗೂ ಶಿಕ್ಷಕ-ಶಿಕ್ಷಕೇತರ ಸಿಬ್ಬಂದಿ ತಮ್ಮ ಹರ್ಷ ವ್ಯಕ್ತಪಡಿಸಿದ್ದಾರೆ ಎಂದು ವಿವರಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group