ಹುನಗುಂದ : ದಿನಾಂಕ : 15 ರಂದು ಬಾಗಲಕೋಟೆಯಲ್ಲಿ ನಡೆದ ಪ್ರಾಚ್ಯ ಪ್ರಜ್ಞೆ ಸ್ಪರ್ಧೆಯು (ಪುರಾತತ್ವ ಸಂಗ್ರಹಾಲಯಗಳು ಹಾಗೂ ಪರಂಪರೆ ಇಲಾಖೆ ಮೈಸೂರು ) ಇವರ ಸಹಯೋಗದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಪಟ್ಟಣದ ಸರ್ಕಾರಿ ಆದರ್ಶ ವಿದ್ಯಾಲಯ ವಿದ್ಯಾರ್ಥಿನಿ ,ಕುಮಾರಿ ಸೃಷ್ಟಿ ಗುಗ್ಗುರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾಳೆ ಎಂದು ಚಿತ್ರಕಲಾ ಶಿಕ್ಷಕ ಚಂದ್ರಕಾಂತ ಸರೋದೆ ತಿಳಿಸಿದ್ದಾರೆ
ಶಾಲಾ SDMC ಅಧ್ಯಕ್ಷ ಹಾಗೂ ಹುನಗುಂದ ಶಾಸಕ ವಿಜಯಾನಂದ. ಕಾಶಪ್ಪನವರ ಹಾಗೂ ಅಧ್ಯಕ್ಷರು, ಕರ್ನಾಟಕ ವೀರಶೈವ ಲಿಂಗಾಯತ ನಿಗಮ ನಿಯಮಿತ,ಬೆಂಗಳೂರು. ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೇದಾರ ಹಾಗೂ ಶಾಲಾ SDMC ಉಪಾಧ್ಯಕ್ಷರು, ಸರ್ವ ಸದಸ್ಯರು ಮುಖ್ಯಗುರುಗಳು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

