ರಾಜ್ಯ ಮಟ್ಟದ ಕವಿಗೋಷ್ಠಿಗೆ ಮಹಾಂತೇಶ ಮುದಕನಗೌಡರ ಆಯ್ಕೆ

Must Read

ಬೈಲಹೊಂಗಲ- ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೈಲವಾಡ ಗ್ರಾಮದ ಗಣ್ಯ ಮನೆತನದ ಪ್ರಗತಿಪರ ಕೃಷಿಕರಾದ ,ಉದಯೋನ್ಮುಖ ಬರಹಗಾರ,ಸಂಘಟಕ ಮಹಾಂತೇಶ ಶಿವಪ್ಪ ಮುದಕನಗೌಡರ( ಬೈಲವಾಡ)ಅವರು ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನವೆಂಬರ 23ರಂದು ಬೆಂಗಳೂರು ಕೇಂದ್ರ ಬಸವ ಸಮಿತಿಯಿಂದ ಬೈಲಹೊಂಗಲ ಪಟ್ಟಣದ ಚನ್ನಮ್ಮ ಸಮಾಧಿ ರಸ್ತೆಯಲ್ಲಿರುವ ಗಣಾಚಾರಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ನಡೆಯುವ ರಾಜ್ಯಮಟ್ಟದ ಕವಿಗೋಷ್ಠಿಗೆ ಆಯ್ಕೆ ಆಗಿದ್ದಾರೆ ಎಂದು ರಾಜ್ಯ ಮಟ್ಟದ ಕವಿಗೋಷ್ಠಿಯ ಮುಖ್ಯ ಸಂಯೋಜಕರಾದ, ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ ಅವರು ತಿಳಿಸಿದ್ದಾರೆ.

ರಾಜ್ಯಮಟ್ಟದ ಕವಿಗೋಷ್ಠಿಗೆ ಆಯ್ಕೆಯಾದ ಮಹಾಂತೇಶ ರವರು ವೃತ್ತಿಯಲ್ಲಿ ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಯ ಉದ್ಯೋಗಿಯಾದರೂ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವು ಹೊಂದಿದ್ದಾರೆ. ಕಥೆ,ಕವನ,ಶಾಲಾ ಗೀತೆ ಮತ್ತು ಚುಟುಕುಗಳನ್ನು ಬರೆದಿದ್ದಾರೆ.ಉತ್ತಮ ವಾಗ್ಮಿಯೂ ಆಗಿರುವ ಮಹಾಂತೇಶ ರವರು ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ,ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಹಾಗೂ ಕೇಂದ್ರ ಬಸವ ಸಮಿತಿಯ ಬಸವ ಪಥ ಸದಸ್ಯರು ಆಗಿ ಕನ್ನಡದ ಸೇವೆ ಸಲ್ಲಿಸುತ್ತಿದ್ದಾರೆ.

ರಾಜ್ಯ ಮಟ್ಟದ ಕವಿಗೋಷ್ಠಿಗೆ ಆಯ್ಕೆಯಾದ ಮಹಾಂತೇಶ ರವರನ್ನು, ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಮಾಜಿ ಅಧ್ಯಕ್ಷರಾದ ಮೋಹನ ಬಸನಗೌಡ ಪಾಟೀಲ, ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಎನ್.ಆರ್.ಠಕ್ಕಾಯಿ,ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಬಸವರಾಜ ಬಾಳೇಕುಂದರಗಿ, ಉಪಾಧ್ಯಕ್ಷರಾದ ರಾಜು ಕುಡಸೋಮಣ್ಣವರ , ವ್ಯವಸ್ಥಾಪಕರ ನಿರ್ದೇಶಕರಾದ ಜಿ.ಎಂ.ಪಾಟೀಲ,ನಿರ್ದೇಶಕರಾದ ಉಮೇಶ ಬಾಳಿ,ರಾಚಪ್ಪ ಮಟ್ಟಿ, ಪ್ರಕಾಶ ಮೂಗಬಸವ,ಮಹಾಂತೇಶ ಮತ್ತಿಕೊಪ್ಪ, ಕಾರ್ತಿಕ ಮಲ್ಲೂರ, ಅಶೋಕ ಯರಗೊಪ್ಪ, ಮಲ್ಲಪ್ಪ ಅಷ್ಟಗಿ, ಶ್ರೀಮತಿ ಅನಿತಾ ಮೆಟಗುಡ್ಡ,ಶ್ರೀಮತಿ ಕಸ್ತೂರಿ ಸೋಮನಟ್ಟಿ,ಅದೃಶಪ್ಪ ಕೊಟಬಾಗಿ,ಅಶೋಕ ಬಾಳೇಕುಂದರಗಿ,ರಾಮಚಂದ್ರ ಕಕ್ಕಯ್ಯನವರ, ಸಣ್ಣಭೀಮಶೆಪ್ಪ ಅಂಬಡಗಟ್ಟಿ,ರಾಜಶೇಖರ ಎತ್ತಿನಮನಿ, ಶ್ರೀಶೈಲ ಶರಣಪ್ಪನವರ,ಶಿವಾನಂದ ದೂತಗುಂಡಿ,ಬಸವರಾಜ ಬೋಳಗೌಡರ,ಶ್ರೀಶೈಲ ಮೂಗಬಸವ,ಸಿದ್ದನಗೌಡ ಪಾಟೀಲ( ಅಮರಾಪುರ) ಕಾರ್ಯದರ್ಶಿ ಅಶೋಕ ಬೋಮ್ಮಣವರ, ಸಿಬ್ಬಂದಿ ವರ್ಗ ಮತ್ತು ಕಾರ್ಮಿಕ ವರ್ಗ ಮಹಾಂತೇಶ ಮುದಕನಗೌಡರ ಅವರಿಗೆ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group