ನಟ ಪ್ರೇಮ್ ರಿಂದ ಕಿದ್ವಾಯಿ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Must Read

ಹಂಸ ಸಾಂಸ್ಕೃತಿಕ -ಸಾಮಾಜಿಕ ಸಿಂಚನ; ಹಂಸ ಜ್ಯೋತಿ ಟ್ರಸ್ಟ್ ನಿಂದ 70ನೇ ಕನ್ನಡ ನಾಡ ಹಬ್ಬ

ಸುವರ್ಣ ಮಹೋತ್ಸವ ಸಂಭ್ರಮದಲ್ಲಿರುವ ಹಂಸ ಜ್ಯೋತಿ ಟ್ರಸ್ಟ್ 70ನೇ ಕನ್ನಡ ನಾಡ ಹಬ್ಬದ ಪ್ರಯುಕ್ತ ಹಂಸ ಸಾಂಸ್ಕೃತಿಕ ಸಾಮಾಜಿಕ ಸಿಂಚನ ಕಾರ್ಯಕ್ರಮದ ಅಂಗವಾಗಿ ಬೆಂಗಳೂರು ನಗರದ ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಯ 1000 ರೋಗಿಗಳಿಗೆ ಉಚಿತವಾಗಿ ಹಣ್ಣು ಹಂಪಲು, ಬನ್ನು ಮತ್ತು ಸಿಹಿ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಿದ್ವಾಯಿ ಸ್ಮಾರಕ ಗ್ರಂಥಿ ಆಸ್ಪತ್ರೆಯ ನಿರ್ದೇಶಕ ಡಾ. ಟಿ ನವೀನ್ ಸಮಾರಂಭ ಉದ್ಘಾಟಿಸಿದರು ಹಿರಿಯರಂಗ ಸಂಘಟಕ ಶ್ರೀನಿವಾಸ ಜಿ ಕಪ್ಪಣ್ಣ ಅಧ್ಯಕ್ಷತೆ ವಹಿಸಿದ್ದ ಕಾರ್ಯಕ್ರಮದಲ್ಲಿ ಖ್ಯಾತ ಚಲನಚಿತ್ರ ನಟ ಲವ್ಲಿ ಸ್ಟಾರ್ ಪ್ರೇಮ್ ಮಾತನಾಡುತ್ತ ಕಳೆದ 27 ವರ್ಷಗಳಿಂದ ದಾನಿಗಳ ನೆರವಿನಿಂದ ಈ ಉಪಯುಕ್ತ ಸೇವಾ ಕಾರ್ಯ ಮಾಡುತ್ತ ಸಾಗಿರುವ ಹಂಸಜ್ಯೋತಿ ಟ್ರಸ್ಟ್ ನ ಕಾರ್ಯ ಶ್ಲಾಘನೀಯ ಎಂದು ಆಭಿನಂದಿಸಿದರು.

ಮಾಜಿ ಶಾಸಕ ಎಸ್ ಬಾಲರಾಜ್, ಕರ್ನಾಟಕ ಪದ್ಮಶಾಲಿ ಸಂಘದ ಅಧ್ಯಕ್ಷ ಎನ್ ಜಗದೀಶ್, ಚಲನಚಿತ್ರ ನಿರ್ಮಾಪಕಿ ಡಾ.ಸುಕನ್ಯಾ ಹಿರೇಮಠ, ಹಂಸ ಜ್ಯೋತಿ ಟ್ರಸ್ಟ್ ನ ಸಂಸ್ಥಾಪಕ ವ್ಯವಸ್ಥಾಪಕ ಟ್ರಸ್ಟಿ ಎಂ ಮುರುಳಿಧರ ಮತ್ತು ಕಾರ್ಯನಿರ್ವಾಹಕ ಟ್ರಸ್ಟಿ, ವಿಜಯ ಮುರುಳಿಧರ ಮೊದಲಾದವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು. ಹಲವು ಗಾಯಕರು ಕನ್ನಡ ಗೀತೆಗಳ ಗಾಯನದ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

LEAVE A REPLY

Please enter your comment!
Please enter your name here

Latest News

ಬೆಳ್ಳಿ ಬಂಗಾರ ಕದ್ದ ಖದೀಮರ ಹೆಡೆಮುರಿ ಕಟ್ಟಿದ ಗೋಕಾಕ ಪೋಲಿಸರು

ಗೋಕಾಕ ನಗರದ ಬೀಗ ಹಾಕಿದ್ದ ಮನೆಯೊಂದರ ಕೀಲಿ ಮುರಿದು ಬೆಳ್ಳಿ ಬಂಗಾರ ಸೇರಿದಂತೆ ನಗದು ಹಣ ಕದ್ದು ಪರಾರಿಯಾಗಿದ್ದ ಕುಖ್ಯಾತ ಖದೀಮರನ್ನು ಗೋಕಾಕ ಪೋಲಿಸರು ಬಂಧಿಸುವಲ್ಲಿ...

More Articles Like This

error: Content is protected !!
Join WhatsApp Group