ಮಕ್ಕಳ ಪ್ರತಿಭೆ ಅರಳಿಸಲು ಪ್ರತಿಭಾ ಕಾರಂಜಿ ಸೂಕ್ತ – ಬಸನಗೌಡ ಪಾಟೀಲ

Must Read

ಸಿಂದಗಿ: ಮಕ್ಕಳಲ್ಲಿ ಹುದುಗಿರುವ ಪ್ರತಿಭೆ ಅರಳಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದ್ದು, ಮಕ್ಕಳು ಕೂಡ ಉತ್ಸಾಹದಿಂದ ಪಾಲ್ಗೊಳ್ಳಬೇಕು ಎಂದು ಶಿಕ್ಷಣ ಸಂಯೋಜಕ ಬಸನಗೌಡ ಬಿ ಪಾಟೀಲ ಹೇಳಿದರು.

ತಾಲೂಕಿನ ಚಿಕ್ಕಸಿಂದಗಿ ಗ್ರಾಮದ ಕಾಯಕ ಶಿಕ್ಷಣ ಸಂಸ್ಥೆಯ ಡಾ.ಕೆ ಎಸ್ ಮಠ ಹಿರಿಯ ಪ್ರಾಥಮಿಕ ಹಾಗೂ ಪ್ರೌಡ ಶಾಲೆಯಲ್ಲಿ ವಿಜಯಪುರ ಜಿಲ್ಲಾ ಪಂಚಾಯತ ಮತ್ತು ಶಾಲಾ ಶಿಕ್ಷಣ ಇಲಾಖೆ ಹಾಗೂ ಸಿಂದಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳು ಕಾರ್ಯಾಲಯ ಸಮೂಹ ಸಂಪನ್ಮೂಲ ಕೇಂದ್ರ ಕನ್ನೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಸ್ವರ್ಧೆಗಳು ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಅವರು ಉದ್ಘಾಟಿಸಿ ಭಾಗವಹಿಸಿ ಮಾತನಾಡಿದರು.

ವಿಶ್ರಾಂತ ಮುಖ್ಯ ಶಿಕ್ಷಕ ಎನ್ ಕೆ ಚೌಧರಿ ಮಾತನಾಡಿ ಸರಕಾರ ಶಾಲಾ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಭಾ ಕಾರಂಜಿ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಇಲ್ಲಿ ಮಕ್ಕಳು ತಮ್ಮಲ್ಲಿರುವ ಕಲೆ, ಸಾಹಿತ್ಯ, ಪ್ರತಿಭೆಯನ್ನು ತೋರಿ ಸಾಂಸ್ಕೃತಿಕವಾಗಿ ಮುಂದೆ ಬರಬೇಕು ಎಂದು ಕರೆ ನೀಡಿದರು.

ರಾಜ್ಯ ಪರಿಷತ್ತು ಸದಸ್ಯ ಶಿಕ್ಷಕ ಭೀಮನಗೌಡ ಬಿರಾದಾರ ಮಾತನಾಡಿ ವಿಧ್ಯಾರ್ಥಿಗಳಿಗೆ ಪ್ರತಿಭೆ ಹೊರಹಾಕಲು ಪ್ರತಿಭಾ ಕಾರಂಜಿ ಇದೊಂದು ಉತ್ತಮ ವೇದಿಕೆಯಾಗಿದೆ ಎಂದರು.

ಕಾಯಕ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ರವಿಸ್ವಾಮಿ ಹತ್ತರಕಿಹಾಳ ಮಠ ಅಧ್ಯಕ್ಷತೆವಹಿಸಿ ಮಾತನಾಡಿ ಪ್ರತಿಯೊಂದು ಮಗುವಿನಲ್ಲೂ ಒಂದಲ್ಲ ಒಂದು ಸಾಂಸ್ಕೃತಿಕ ಪ್ರತಿಭೆ ಅಡಗಿರುತ್ತದೆ. ಅದನ್ನು ಗುರುತಿಸಿ ಅನಾವರಣ ಮಾಡುವ ಮೂಲಕ ಮಕ್ಕಳು ಸರ್ವಾಂಗೀಣ ಬೆಳವಣಿಗೆ ಸಾಧಿಸಲು ಅವಕಾಶ ಕಲ್ಪಿಸಬೇಕು. ಸೋಲು, ಗೆಲುವಿನ ಬಗ್ಗೆ ಯೋಚಿಸದೆ ಸ್ಪರ್ಧೆಗಳಲ್ಲಿ ಎಲ್ಲ ವಿದ್ಯಾರ್ಥಿಗಳು ಭಾಗವಹಿಸಬೇಕು ಎಂದು ಸಲಹೆ ನೀಡಿದರು.
ಶಿಕ್ಷಕ ಮಕ್ಕಳ ಸಾಹಿತಿ ಬಸವರಾಜ ಅಗಸರ ಮಾತನಾಡಿದರು.

ಕ ರಾ ಪ್ರಾ ಶಾ ಶಿ ಸಂ ನಿರ್ದೇಶಕಿ ಬಸಮ್ಮ ಭಜಂತ್ರಿ. ಪಿ ಕೆ .ಪಿ .ಎಸ್ ಬ್ಯಾಂಕ ಮಾಜಿ ಅಧ್ಯಕ್ಷ ಶ್ರೀಶೈಲಯ್ಯ ಹಿರೇಮಠ .ಮುಖ್ಯ ಶಿಕ್ಷಕ ಪರಶುರಾಮ ಜಮದಾರ ವೇದಿಕೆ ಮೇಲೆ ಇದ್ದರು .

ನಿವೃತ ಶಿಕ್ಷಕರಾದ ಬಿ ಎಸ್ ದೇವರಮನಿ .ಎನ್ ಕೆ ಚೌಧರಿ .ಎಮ್ ಜಿ ಚೌಧರಿ ಹಾಗೂ ಎನ್ ಜಿ ಓ ಸದಸ್ಯ ಭೀಮನಗೌಡ ಬಿರಾದಾರ ಅವರಿಗೆ ಸನ್ಮಾನಿಸಿ ಗೌರವಿಸಿದರು.

ಕ್ಲಸ್ಟರದ ವಿವಿಧ ಶಾಲೆಯ ಮಕ್ಕಳು ಭಾಷಣ ಸ್ಪರ್ಧೆ, ರಸಪ್ರಶ್ನೆ, ಕಂಠಪಾಠ, ಛದ್ಮವೇಶ ಕ್ಲೇ ಮಾಡಲಿಂಗ್,ಕಥೆ ಹೇಳುವುದು ಹಾಗೂ ಇನ್ನಿತರ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ,ದ್ವೀತಿಯ ತೃತೀಯ ಸ್ಥಾನ ಪಡೆದುಕೊಂಡರು. ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿದ ವಿಧ್ಯಾರ್ಥಿಗಳು ಸಂತಸ ಪಟ್ಟರು. ವಿವಿಧ ಶಾಲೆಗಳ ಮುಖ್ಯಗುರುಗಳು ಶಿಕ್ಷಕರು ಭಾಗವಹಿಸಿದರು.

ಸಿ ಆರ್ ಪಿ ಸೋಮೇಶಗೌಡ ಪಾಟೀಲ ಸ್ವಾಗತಿಸಿದರು. ಶಿಕ್ಷಕ ರುದ್ರಗೌಡ ಭಿ ಮಾಗಣಗೇರಿ ನಿರೂಪಿಸಿದರು. ಶಿಕ್ಷಕ ಮಂಜುನಾಥ ಪೂಜಾರಿ ವಂದಿಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group