ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ(ಯು) ಗ್ರಾಮದಲ್ಲಿನ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೋಮವಾರ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು.
ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪ್ರಯತ್ನದ ಫಲವಾಗಿ ಮಂಜೂರಾಗಿರುವ ಸುಮಾರು 50 ಲಕ್ಷ ರೂ,ಗಳ ವೆಚ್ಚದಲ್ಲಿ ರಸ್ತೆಗಳ ನಿರ್ಮಾಣ ಮಾಡಲಾಗುತ್ತಿದ್ದು, ನಿಗದಿತ ಸಮಯದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಹಾಗೂ ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಿದರು.
ಈ ವೇಳೆ ಕಾಡಾ ಅಧ್ಯಕ್ಷ ಯುವರಾಜ ಕದಂ, ಬಾಳು ದೇಸೂರಕರ್, ಬಾಗಣ್ಣ ನರೋಟಿ, ಯಲ್ಲಪ್ಪ ಕಲಕಾಂಬ್ಕರ್, ಪಾಪು ಪಾಟೀಲ, ಯಲ್ಲಪ್ಪ ನರೋಟಿ, ಮಹಾದೇವ್ ಪಾಟೀಲ, ಮಾರುತಿ ಪಾಟೀಲ, ಶಿವಾಜಿ ಬೋಕಡೆ, ಅಶೋಕ ಚೌಗುಲೆ, ಬಾಲಕೃಷ್ಣ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

