ಸಿಂದಗಿ; ಆಯಾ ವಾರ್ಡುಗಳು ಸಾರ್ವಜನಿಕರು, ವಯೋ ವೃದ್ಧರು ವಾಯು ವಿಹಾರಕ್ಕೆ ಅನುಕೂಲವಾಗಲೆಂದು ಪಟ್ಟಣದ ಎಲ್ಲ ಉದ್ಯಾನವನಗಳ ಅಭಿವೃದ್ಧಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಾಗುತ್ತಿದೆ. ಪಟ್ಟಣದಲ್ಲಿ ಒಟ್ಟು ೭೨ ಉದ್ಯಾನವನಗಳಿವೆ ಅವುಗಳಲ್ಲಿ ೧೦-೧೫ ಮಾತ್ರ ಅಭಿವೃದ್ಧಿ ಪಡಿಸಲಾಗಿದೆ ಇನ್ನುಳಿದ ಉದ್ಯಾನವನಗಳನ್ನು ಹಂತ ಹಂತವಾಗಿ ಅಭಿವೃದ್ಧಿ ಪಡಿಸಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.
ಪಟ್ಟಣದ ಹಳೇ ಚಾಂದಕವಟೆ ರಸ್ತೆಯಲ್ಲಿರುವ ಮೊಹ್ಮದ ಇಮ್ತಿಯಾಜ ಲೇಔಟದಲ್ಲಿನ ಗಾರ್ಡನ ಅಭಿವೃದ್ದಿಗೆ ಅಮೃತ ೦೨ ಯೋಜನೆಯಡಿ ಅಂದಾಜು ಮೊತ್ತ ರೂ.೨೩.೩೯ ಲಕ್ಷ ವೆಚ್ಚದ ಕಾಮಗಾರಿಗೆ ಭೂಮಿ ಪೂಜೆ ನೇರವೇರಿಸಿ ಮಾತನಾಡಿ, ಪಟ್ಟಣದ ಐಬಿ ಹಿಂದುಗಡೆಯಿರುವ ಸರಕಾರಿ ಉರ್ದು ಶಾಲೆಯ ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿ ಕೊಡಬೇಕು ಎಂದು ಸನ್ ೨೦೨೩-೨೪ನೇ ಸಾಲಿನ ೧೫ನೇ ಹಣಕಾಸು ಯೋಜನೆಯಡಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಭೂಮಿ ಪೂಜೆ ನೇರವೇರಿಸಲಾಗಿದೆ ಪಟ್ಟಣದ ಅಭಿವೃದ್ಧಿಗೆ ಸಾವಿರಾರು ಕೋಟಿ ಅನುದಾನ ತಂದು ಅಭಿವೃದ್ಧಿ ಪಡಿಸಲು ಮುಂದಾಗಿದ್ದೇನೆ ಕಾರಣ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.
ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುರೇಶ ಪೂಜಾರಿ, ಎಂ.ಎ.ಖತೀಬ ಕಾಚೂರ , ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ಬಸವರಾಜ ಕಾಂಬಳೆ, ಸದಸ್ಯರಾದ ಅಂಬರೀಷ ಚೌಗಲೇ, ಪುರಸಭೆ ಉಪಾಧ್ಯಕ್ಷ ಸಂದೀಪ ಚೌರ, ಭೂ ನ್ಯಾಯ ಮಂಡಳಿ ನಾಮ ನಿರ್ದೇಶನ ಸದಸ್ಯರಾದ ಭೀಮು ವಾಲಿಕಾರ, ರಜತ ತಾಂಬೆ, ಹಾಸೀಂ ಆಳಂದ, ರಾಜಣ್ಣಿ ನಾರಾಯಣಕರ, ರಾಜು ಖೇಡ ಸೇರಿದಂತೆ ಮುಖಂಡರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

