ಮೂಡಲಗಿ: ನಾಡಿನ ಹಿರಿಯ ರಾಜಕಾರಣಿಗಳು, ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಸಚಿವರಾದ ಶ್ಯಾಮನೂರು ಶಿವಶಂಕರಪ್ಪ ಅವರು ನಿಧನರಾದ ಸುದ್ದಿಯನ್ನು ಕೇಳಿ ಮನಸ್ಸಿಗೆ ತುಂಬಾ ಬೇಸರವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಸಂತಾಪ ವ್ಯಕ್ತಪಡಿಸಿದರು.
ರಾಜಕಾರಣ ಮಾತ್ರವಲ್ಲದೆ ಶಿಕ್ಷಣ, ಉದ್ಯಮ, ಸಮಾಜಸೇವೆ ಕ್ಷೇತ್ರಗಳಲ್ಲಿಯೂ ಯಶಸ್ಸು ಗಳಿಸಿ ಮಾದರಿ ವ್ಯಕ್ತಿತ್ವದ ಸಾಧಕರಾಗಿದ್ದರು. ನೇರ ನಡೆನುಡಿಯ ಅವರು ಸಚಿವರಾಗಿಯೂ ನಾಡಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಅಗಲಿಕೆಯು ನಾಡಿಗೆ ಬಹುದೊಡ್ಡ ನಷ್ಟವಾಗಿದೆ.
ಶ್ರೀಯುತರ ಆತ್ಮಕ್ಕೆ ಸದ್ಗತಿ ಸಿಗಲಿ. ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ಸಂತಾಪ ಸೂಚಿಸಿದ್ದಾರೆ.

