ಬೀದರ ಪೊಲೀಸರಿಗೆ ಬಾಂಗ್ಲಾದೇಶ ಪ್ರಧಾನಿ ಮೇಲೆ ಪ್ರೀತಿ !

Must Read

ಬಾಂಗ್ಲಾ ದೇಶದ ವಿರುದ್ಧ ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸ್ ಜೊತೆಗೆ ವಾಗ್ವಾದಕ್ಕಿಳಿದ  ಹಿಂದೂ ಕಾರ್ಯಕರ್ತರು

ಬೀದರ -ನೆರೆಯ ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಲ್ಲೆ ಪ್ರಕರಣಗಳು ಭಾರತದಲ್ಲೂ ಕಾವು ಮೂಡಿಸತೊಡಗಿದೆ. ವಿಶ್ವ ಹಿಂದೂ ಪರಿಷತ್‌, ಭಜರಂಗ ದಳ ಸೇರಿದಂತೆ ವಿವಿಧ ಹಿಂದೂ ಪರ ಸಂಘಟನೆಗಳು ದೇಶದ ಹಲವು ನಗರಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದು, ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಮುಂದಾಗುವಂತೆ ಒತ್ತಾಯಿಸಿವೆ.

ಬೀದರ ನಲ್ಲಿ ಕೂಡ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಪ್ರತಿಭಟನಾಕಾರರು ಬಾಂಗ್ಲಾದೇಶ ಪ್ರಧಾನಿಯ ಭಾವಚಿತ್ರ ಸುಡಲು ಮುಂದಾದ ಸಂದರ್ಭದಲ್ಲಿ ಪೊಲೀಸ್ ತಡೆಯುಂಟು ಮಾಡಿದರು.

ಇದರಿಂದ ಕೆರಳಿದ ವಿಶ್ವ ಹಿಂದೂ ಪರಿಷತ್ ಸದಸ್ಯರಾಗಿರುವ ಶಶಿಕುಮಾರ್ ಹೊಸಳ್ಳಿ ಪೊಲೀಸ್ ವಿರುದ್ಧ ವಾಗ್ವಾದಕ್ಕಿಳಿದರು. ನಾವು ನಮ್ಮ ರಾಜ್ಯದ ಮುಖ್ಯಮಂತ್ರಿ ಅಥವಾ ನಮ್ಮ ದೇಶದ ಪ್ರಧಾನಿ ನರೇಂದ್ರ ಮೋದಿಯವರ ಭಾವಚಿತ್ರ ಸುಡುತ್ತಿಲ್ಲ..ಹೊರ ದೇಶದ ಪ್ರಧಾನಿಯ ಫೋಟೋ ಸುಟ್ಟರೆ ನೀವು ಯಾಕೆ ವಿರೋಧ ಮಾಡುತ್ತೀರಿ ಸುಡಲು ಅನುಮತಿ ಯಾಕೆ ಕೊಡುವುದಿಲ್ಲ ಎಂದು ಪ್ರತಿಭಟನೆಕಾರರು ಪೊಲೀಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group