ಬೆಂಗಳೂರು: ಅಖಿಲ ಕರ್ನಾಟಕ ಕುವೆಂಪು ಸಾಂಸ್ಕೃತಿಕ ವೇದಿಕೆ ವತಿಯಿಂದ ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಕನ್ನಡ ನುಡಿ ಸಮ್ಮೇಳನದಲ್ಲಿ ಕುಮಾರಿ ಭೂಮಿಕಾ ಅಶೋಕ ಚಲವಾದಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಭೂಮಿಕಾ ದ್ವಿತೀಯ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 18 ನೇ ರ್ಯಾಂಕ್‍ನಲ್ಲಿ ತೇರ್ಗಡೆಯಾಗಿದ್ದಕ್ಕೆ ಸಾನಿಧ್ಯವನ್ನು ವಹಿಸಿದ ಶ್ರೀ ಡಾ. ನಿಶ್ಚಲಾನಂದ ಸ್ವಾಮೀಜಿಯವರು ಭೂಮಿಕಾ ಅವರನ್ನು ಅಭಿನಂದಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಹಿರಿಯ ಸಾಹಿತಿ ಡಾ. ಮೂಡ್ನಾಕೂಡು ಚಿನ್ನಸ್ವಾಮಿ, ಕರೀಗೌಡ ಬೀಚನಹಳ್ಳಿ, ವೇದಿಕೆಯ ಅಧ್ಯಕ್ಷ ಜೀವನ್ಮುಖಿ ಸುರೇಶ್, ಪತ್ರಕರ್ತೆ ಭಾಗ್ಯ ಕೃಷ್ಣಮೂರ್ತಿ ಹಾಗೂ ಇತರರು ಉಪಸ್ಥಿತರಿದ್ದರು

