ಸಹಕಾರ ಮಹಾಮಂಡಳಕ್ಕೆ ೪ ನೇ ಬಾರಿಗೆ ಮನಗೂಳಿ ಆಯ್ಕೆ ; ಅಭಿನಂದನೆ

Must Read

ಸಿಂದಗಿ: ಸಹಕಾರಿ ಕ್ಷೇತ್ರದಲ್ಲಿ ಅನೇಕ ಸಾಧನೆಗಳಿಗೆ ಕಾರಣರಾದ ಶಾಸಕ ಅಶೋಕ ಮನಗೂಳಿ ಅವರು ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳ ಬೆಂಗಳೂರು ಇದರ ಆಡಳಿತ ಮಂಡಳಿಗೆ ಸತತವಾಗಿ ೪ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾಗಿದ್ದು ಈ ಕ್ಷೇತ್ರದ ಹಿರಿಮೆ ಹೆಚ್ಚಿಸಿದ್ದಾರೆ ಎಂದು ಪಂಚಮಸಾಲಿ ಸಮಾಜದ ಅಧ್ಯಕ್ಷ ಎಂ.ಎಂ.ಹಂಗರಗಿ ಅಭಿಮತ ವ್ಯಕ್ತಪಡಿಸಿದರು.

ನಗರದ ಶಾಸಕರ ಸ್ವ ಗೃಹದಲ್ಲಿ ಕರ್ನಾಟಕ ರಾಜ್ಯ ಪಟ್ಟಣ ಸಹಕಾರ ಬ್ಯಾಂಕುಗಳ ಮಹಾಮಂಡಳ ಬೆಂಗಳೂರು ಇದರ ಆಡಳಿತ ಮಂಡಳಿಗೆ ಸತತವಾಗಿ ೪ನೇ ಬಾರಿಗೆ ಅವಿರೋಧವಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಗೆಳೆಯರ ಬಳಗದ ವತಿಯಿಂದ ಸನ್ಮಾನಿಸಿ ಗೌರವಿಸಿ ಮಾತನಾಡಿದರು.

ಸನ್ಮಾನ ಸ್ವೀಕರಿಸಿದ ಶಾಸಕ ಅಶೋಕ ಮನಗೂಳಿ ಮಾತನಾಡಿ, ಭಾರತದಲ್ಲಿ ಸಹಕಾರಿ ಕ್ಷೇತ್ರದ ಪಿತಾಮಹ ಎಸ್.ಎಸ್.ಪಾಟೀಲ ಸಹಕಾರ ಕ್ಷೇತ್ರವನ್ನು ಸ್ಥಾಪನೆ ಮಾಡಿದ್ದರೆ ಕರ್ನಾಟಕದಲ್ಲಿ ಮಳವಳ್ಳಿ ಶಿವರಾಯರು ಈ ಕ್ಷೇತ್ರಕ್ಕೆ ನೀರು ಹಾಕಿ ಬೆಳೆಸಿದ್ದಾರೆ ಅಂತೆಯೇ ಸಣ್ಣ ಅತೀಸಣ್ಣ ವ್ಯಾಪಾರಸ್ಥರ ಸ್ಥಿತಿ ಸುಧಾರಣೆ ಕಂಡಿದೆ. ಅವರ ಹಾದಿಯಲ್ಲಿ ಈ ಕ್ಷೇತ್ರವನ್ನು ಬೆಳೆಸಲು ಸಹಕಾರಿ ಮಂಡಳಿಗೆ ಸತತವಾಗಿ ನಾಲ್ಕನೇ ಬಾರಿಗೆ ಅವಿರೋಧವಾಗಿ ಆಯ್ಕೆ ಮಾಡಲು ಸಹಕರಿಸಿ ಸಹಕಾರಿ ರಂಘದ ಭೀಷ್ಮರೆಂದೆ ಖ್ಯಾತಿ ಪಡೆದ ಸಚಿವ ಎಚ್.ಕೆ.ಪಾಟೀಲರಿಗೆ ಅಭಿನಂದನೆ ಸಲ್ಲಿಸುತ್ತೇನೆ ಅಲ್ಲದೆ ಈ ಬಾಗದಲ್ಲಿ ಸಹಕಾರಿ ಕ್ಷೇತ್ರದ ಬೆಳವಣಿಗೆಯಲ್ಲಿ ಜಿಲ್ಲೆಯ ಮತ್ತು ರಾಜ್ಯದ ಎಲ್ಲ ಪಟ್ಟಣ ಸಹಕಾರಿ ಬ್ಯಾಂಕುಗಳ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಎಲ್ಲ ಸದಸ್ಯರಿಗೆ ಸಹಕಾರಿ ಸಂಘಗಳ ಸಹಕಾರ ಅತ್ಯಗತ್ಯ ಎಂದರು.

ಈ ಸಂದರ್ಭದಲ್ಲಿ ಟಿಎಸ್‌ಪಿ ಮಂಡಳಿಯ ನಿರ್ದೆಶಕ ವ್ಹಿ.ಬಿ.ಕುರುಡಿ, ಗುತ್ತಿಗೆದಾರ ಆರ್.ಡಿ.ದೇಸಾಯಿ, ಸಂಗನಗೌಡ ಪಾಟೀಲ ಅಗಸಬಾಳ, ಶಿವು ಬಡಾನೂರ, ದೈಹಿಕ ಶಿಕ್ಷಣಾಧಿಕಾರಿ ರಮೇಶ ಬಿರಾದಾರ, ಮಹ್ಮದಪಟೇಲ ಬಿರಾದಾರ, ಸಾಹೇಬಪಟೇಲ ಅವಟಿ, ಹಾಸೀಂ ಆಳಂದ, ರಾಜು ಮದರಖಾನ, ಶಬ್ಬೀರಪಟೇಲ ಬಿರಾದಾರ ಗಣಿಹಾರ ಸೇರಿದಂತೆ ಅನೇಕರಿದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group