ಸಿಂದಗಿಯ ಮೌಲಾಲಿ ಆಲಗೂರಗೆ ಸ್ವರ್ಣಭೂಮಿ ಸ್ಟಾರ್ ಅಚೀವರ್ಸ್ ಪ್ರಶಸ್ತಿ

Must Read

ಸಿಂದಗಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಮೈಸೂರು, ಸ್ವರ್ಣಭೂಮಿ ಫೌಂಡೇಶನ್, ಕರ್ನಾಟಕ ಹಾಗೂ ರೋಟರಿ ಕ್ಲಬ್, ಕೋಲಾರ ಇವರ ಸಂಯುಕ್ತ ಆಶ್ರಯದಲ್ಲಿ ಜ.11 ರ ಭಾನುವಾರ ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಜಿಲ್ಲಾ ಕನ್ನಡ ಸಾಹಿತ್ಯ ಭವನ, ನಾಲ್ವಡಿ ಕೃಷ್ಣರಾಜ ಸಭಾಂಗಣದಲ್ಲಿ ಕನ್ನಡ ಹಬ್ಬ-2026, ಪುಸ್ತಕ ಬಿಡುಗಡೆ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರದಲ್ಲಿ ಸಾಧನೆ ಗೈದ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದ ನಡೆಯಲಿದೆ.

ಇದೇ ವೇಳೆ ತಾಲೂಕಿನ ಬೋರಗಿ ಗ್ರಾಮದ (ಬೆಂಗಳೂರಿನಲ್ಲಿ ಹೆಡ್ ಕಾನ್ಸ್‌ಟೇಬಲ್) ಮೌಲಾಲಿ ಕೆ.ಆಲಗೂರ ಇವರ ಸಾಹಿತ್ಯ ಸೇವೆಯನ್ನು ಪರಿಗಣಿಸಿ, ಸ್ವರ್ಣಭೂಮಿ ಸ್ಟಾರ್ ಅಚೀವರ್ಸ್ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸ್ವರ್ಣಭೂಮಿ ಫೌಂಡೇಶನ್‌ ಸಂಸ್ಥಾಪಕ ಅಧ್ಯಕ್ಷ ಬಿ. ಶಿವಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group