ಗೋಕಾಕ ಹಾಗೂ ಸುತ್ತಮುತ್ತಲಿನ ಗ್ರಾಮಗಳ ರೈಲು ಪ್ರಯಾಣಿಕರ ಬೇಡಿಕೆಯ ಆಧಾರದ ಮೇಲೆ ಹುಬ್ಬಳ್ಳಿ – ದಾದರ್ ಸೆಂಟ್ರಲ್ ಎಕ್ಸ್‌ಪ್ರೆಸ್ ರೈಲಿಗೆ (17317/17318) ಗೋಕಾಕ್ ರೋಡ್ ರೈಲು ನಿಲ್ದಾಣದಲ್ಲಿ ನಿಲುಗಡೆಗೆ ರೈಲ್ವೆ ಇಲಾಖೆ ಆದೇಶಿಸಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ನನ್ನ ಮನವಿ ಮೇರೆಗೆ ಗೋಕಾಕ್ ರೋಡ್ ರೈಲ್ವೆ ನಿಲ್ದಾಣಕ್ಕೆ ನಿಲುಗಡೆ ಕಲ್ಪಿಸಿದ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ, ಕೇಂದ್ರ ರೈಲ್ವೆ ರಾಜ್ಯ ಸಚಿವರಾದ ವಿ. ಸೋಮಣ್ಣ ಹಾಗೂ ನೈರುತ್ಯ ರೈಲ್ವೆ ಇಲಾಖೆಯ ಅಧಿಕಾರಿಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುವುದಾಗಿ ಹೇಳಿದ್ದಾರೆ
ಈ ಭಾಗದ ರೈಲ್ವೆ ಪ್ರಯಾಣಿಕರು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಈ ಮೂಲಕ ಕೋರುತ್ತೇನೆ ಎಂದು ಕಡಾಡಿಯವರು ತಿಳಿಸಿದ್ದಾರೆ

