ಮೂಡಲಗಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪಮುಖ್ಯಮಂತ್ರಿಗಳಾದ ಅಜಿತ್ ಪವಾರ್ ಅವರು ಸೇರಿ 5 ಮಂದಿ ಮೃತಪಟ್ಟಿರುವ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ಬೇಸರವಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರ ರಾಜಕಾರಣದ ದಿಕ್ಕನ್ನೇ ಬದಲಿಸಿ, ನಿರ್ಣಾಯಕ ನಾಯಕತ್ವ ಮತ್ತು ಅಭಿವೃದ್ಧಿಯ ಹೊಸ ಮಾರ್ಗವನ್ನು ರೂಪಿಸಿದ ಅಜಿತ್ ಪವಾರ್ ನಿಧನ ತುಂಬಲಾರದ ನಷ್ಟವಾಗಿದೆ ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ, ಅಭಿಮಾನಿಗಳಿಗೆ ಹಾಗೂ ಅವರ ಕುಟುಂಬಸ್ಥರಿಗೆ ಈ ದುಃಖವನ್ನು ಸಹಿಸುವ ಶಕ್ತಿ ಕರುಣಿಸಲಿ ಎಂದು ಸಂತಾಪ ಸೂಚಿಸಿದರು.

