ಸ್ಕೇಟಿಂಗ್‌ನಲ್ಲಿ ಜ್ಯೋತಿ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿನಿಯರ ವಿಶ್ವ ದಾಖಲೆ

Must Read

​ಬೆಳಗಾವಿ: ಇಲ್ಲಿನ ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳಿಯ ಜ್ಯೋತಿ ಸೆಂಟ್ರಲ್ ಸ್ಕೂಲ್‌ನ ಇಬ್ಬರು ವಿದ್ಯಾರ್ಥಿನಿಯರು ಸ್ಕೇಟಿಂಗ್‌ನಲ್ಲಿ ವಿಶ್ವ ದಾಖಲೆ ನಿರ್ಮಿಸುವ ಮೂಲಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ್ದಾರೆ.

​ಆರನೇ ತರಗತಿಯ ಲಾವಣ್ಯ ಹಾಗೂ ಮೂರನೇ ತರಗತಿಯ ಮನಸ್ವಿ ಭಂಡಾರಿ ಸತತ ೧ ಗಂಟೆ ೨೬ ನಿಮಿಷ ೨೬ ಸೆಕೆಂಡ್‌ಗಳ ಕಾಲ ಬಿಡುವಿಲ್ಲದೆ ಸ್ಕೇಟಿಂಗ್ ಮಾಡುವ ಮೂಲಕ ‘ಏಷ್ಯನ್ ಬುಕ್ ಆಫ್ ರೆಕಾರ್ಡ್ಸ್’ ಮತ್ತು ‘ಯು.ಎಸ್.ಎ. ಬುಕ್ ಆಫ್ ರೆಕಾರ್ಡ್ಸ್’ನಲ್ಲಿ ಸ್ಥಾನ ಪಡೆದಿದ್ದಾರೆ. ನಗರದ ಗೋವಾವೇಸ್ ರೋಟರಿ ಕ್ಲಬ್‌ನಲ್ಲಿ ಈ ಪ್ರದರ್ಶನ ನಡೆಯಿತು.

ವಿದ್ಯಾರ್ಥಿನಿಯರ ಈ ಅಮೋಘ ಸಾಧನೆಯನ್ನು ಶಾಲೆಯ ಪ್ರಾಂಶುಪಾಲರಾದ ಸೋನಾಲಿ ಕಂಗ್ರಾಳ್ಕರ್ ಅವರು ಶ್ಲಾಘಿಸಿದ್ದಾರೆ. ಈ ಯಶಸ್ಸು ಶಾಲೆ ಮತ್ತು ಸಂಸ್ಥೆಗೆ ಹೆಮ್ಮೆ ತಂದಿದೆ ಎಂದು ಅವರು ಅಭಿನಂದನೆ ಸಲ್ಲಿಸಿದ್ದಾರೆ.

LEAVE A REPLY

Please enter your comment!
Please enter your name here

Latest News

ವೈ ಬಿ ಕಡಕೋಳ ವರಿಗೆ ಗೌರವ ಸನ್ಮಾನ

ಸವದತ್ತಿ : ತಾಲೂಕಿನ ಶಿಕ್ಷಕ ಸಾಹಿತಿ ವೈ. ಬಿ. ಕಡಕೋಳ ಅವರಿಗೆ ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಲ್ಲಿಸಿದ ತಲ್ಲೂರು ರಾಯನಗೌಡರು, ಸಮಗ್ರ...

More Articles Like This

error: Content is protected !!
Join WhatsApp Group