ಬೆಳಗಾವಿ ವಿಮಾನ ನಿಲ್ದಾಣ ಕಾಮಗಾರಿ ಶೇ.71 ಪೂರ್ಣ

Must Read

ಮೂಡಲಗಿ: ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ನಿರ್ಮಾಣ ಕಾಮಗಾರಿಯು ಪ್ರತಿಶತ 71.5% ರಷ್ಟು ಭೌತಿಕ ಪ್ರಗತಿಯಾಗಿದ್ದು ರೂ 158.27 ಕೋಟಿಗಳ ಅನುದಾನ ವೆಚ್ಚವಾಗಿದೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯದ ರಾಜ್ಯ ಸಚಿವ ಮುರಳೀಧರ್ ಮೊಹಲ್ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿದ್ದಾರೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ.

ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡದ ಪ್ರಗತಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಬೆಳಗಾವಿ ವಿಮಾನ ನಿಲ್ದಾಣವು ದೇಶೀಯ ವಿಮಾನ ನಿಲ್ದಾಣವಾಗಿದ್ದು, ಪ್ರಸ್ತುತ ಎ320 ಮಾದರಿಯ ವಿಮಾನಗಳ ಉಡಾವಣೆಯನ್ನು ನಿರ್ವಹಿಸುತ್ತಿದೆ. ವರ್ಷಕ್ಕೆ 3.5 ಮಿಲಿಯನ್ ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯವಿರುವ ಹೊಸ ಟರ್ಮಿನಲ್ ಕಟ್ಟಡ ಏಪ್ರಿಲ್ 2026 ರ ಅಂತ್ಯದ ವೇಳೆಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

Latest News

ಸನಾತನ ಧರ್ಮ ಎಂದಿಗೂ ನಶಿಸುವುದಿಲ್ಲ – ಅಭಿನವ ಮಂಜುನಾಥ ಸ್ವಾಮೀಜಿ

ಮೂಡಲಗಿ: ‘ಭಾರತದ ಸನಾತನ ಹಿಂದೂ ಧರ್ಮವು  ಶಾಶ್ವತವಾಗಿರುವಂತದ್ದು ಅದು ಎಂದಿಗೂ ನಶಿಸಿ ಹೋಗುವಂತದಲ್ಲ’ ಎಂದು ಹುಕ್ಕೇರಿ ಕ್ಯಾರಗುಡ್ಡ ಮಠದ ಅಭಿನವ ಮಂಜುನಾಥ ಸ್ವಾಮೀಜಿ ಹೇಳಿದರು.ತಾಲ್ಲೂಕಿನ ಕಲ್ಲೋಳಿಯ...

More Articles Like This

error: Content is protected !!
Join WhatsApp Group