ಬೀದರ – ಸರ್ಕಾರಿ ಬಸ್ ಚಾಲಕ ಸೈಡ್ ಕೊಡಲಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನನ್ನು ಬಸ್ ನಿಂದ ಕೆಳಗೆ ಇಳಿಸಿ ಬೈಕ್ ಸವಾರ ಹಲ್ಲೆ ನಡೆಸಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಬೀರಿ (ಕೆ) ಗ್ರಾಮದ ಬಳಿ ನಡೆದಿದೆ
ಭಾಲ್ಕಿ ಬಸ್ ಡಿಪೋಗೆ ಸೇರಿದ ಬಸ್ ಚಾಲಕ ಚಂದ್ರಶೇಖರ ಸ್ವಾಮಿ ಎಂಬುವವರ ಮೇಲೆ ಹಲ್ಲೆ ಮಾಡಿದ ಬೈಕ್ ಸವಾರ ಪರಾರಿಯಾಗಿದ್ದಾನೆ.
ಹಲ್ಲೆಗೋಳಗಾಗಿ ಗಂಭೀರವಾಗಿ ಗಾಯಗೊಂಡ ಚಾಲಕ ಚಂದ್ರಶೇಖರ ಸ್ವಾಮಿಗೆ ಹೆಚ್ಚಿನ ಚಿಕಿತ್ಸೆಗಾಗಿ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಸುದ್ದಿ ತಿಳಿಯುತ್ತಲ್ಲೆ ಘಟನಾ ಸ್ಥಳಕ್ಕೆ ಭಾಲ್ಕಿ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

