spot_img
spot_img

ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ನೀಡಲು ಕರೆ

Must Read

- Advertisement -

ಸಿಂದಗಿ: ಏ 19 ರಂದು ಸಾರ್ವತ್ರಿಕ ಚುನಾವಣೆಯ ನಾಮಪತ್ರ ಸಲ್ಲಿಸಲು ಹಮ್ಮಿಕೊಂಡಿರುವ ಬೃಹತ್ ಕಾರ್ಯಕ್ರಮದಲ್ಲಿ ಮತಕ್ಷೇತ್ರದ ಮತಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ನೀಡಬೇಕು ಎಂದು ಕೈ ಅಭ್ಯರ್ಥಿ ಅಶೋಕ ಮನಗೂಳಿ ಮನವಿ ಮಾಡಿಕೊಂಡರು.

ಪಟ್ಟಣದ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬುಧವಾರ ದಿನದಂದು ಪಕ್ಷದ ಅಧಿಕೃತ ಅಭ್ಯರ್ಥೀ ಬಿ. ಫಾರ್ಮ ನಮೂದಿಯೊಂದಿಗೆ ನಾಮಪತ್ರ ಸಲ್ಲಿಸಲು ಪಟ್ಟಣದ ಮಹಾತ್ಮಾ ಗಾಂಧಿ ವೃತ್ತದಿಂದ ಪ್ರಾರಂಭವಾಗಿ ಅಂಬೇಡ್ಕರ್ ವೃತ್ತ, ಟಿಪ್ಪು ಸುಲ್ತಾನ್ ವೃತ್ತ , ಹಾಗೂ ವಿವೇಕಾನಂದ ವೃತ್ತದಿಂದ ಬಸವೇಶ್ವರ ವೃತ್ತಕ್ಕೆ ಮಾಲಾರ್ಪಣೆ ಸಲ್ಲಿಸುವ ಮೂಲಕ ತಾಲೂಕು ಆಡಳಿತ ಸೌಧದಲ್ಲಿ 2023 ರ ಸಾರ್ವತ್ರಿಕ ಚುನಾವಣೆಯ ನಾಮಪತ್ರ ಸಲ್ಲಿಸಲಾಗುವುದು ಹಾಗೂ ಕಳೆದ ಉಪಚುನಾವಣೆಯಲ್ಲಿ ನನಗೆ ಟಿಕೆಟ್ ನೀಡಲಾಗಿತ್ತು ಆದರೆ ನನಗೆ ಬಿಜೆಪಿ ಸರ್ಕಾರದ ಹಣಬಲದಿಂದ ಗೆಲ್ಲಲು ಸಾಧ್ಯವಾಗಲಿಲ್ಲ ಆದರೆ  ಈ ಬಾರಿ ನನ್ನ ಮೇಲೆ ನಂಬಿಕೆಯನ್ನಿಟ್ಟು ನನಗೆ ಮತ್ತೊಮ್ಮೆ ವರಿಷ್ಠರು ಪಕ್ಷದ ಟಿಕೆಟ್ ನೀಡಿದ್ದಾರೆ ಅವರಿಗೆ ನಾನು ಸದಾ ಚಿರಋಣಿಯಾಗಿರುತ್ತೇನೆ ಹಾಗೂ ಈ ಭಾರಿ ನಡೆಯುವ ಚುನಾವಣೆಯಲ್ಲಿ ಅಶೋಕ ಮನಗುಳಿ ಮಾತ್ರ ಅಭ್ಯರ್ಥಿಯಲ್ಲ ಕಾಂಗ್ರೆಸ್ ಪಕ್ಷಕ್ಕಾಗಿ ದುಡಿಯುವ ಪ್ರತಿಯೊಬ್ಬ ಕಾರ್ಯಕರ್ತನೂ ಮತಕ್ಷೇತ್ರದ ಅಭ್ಯರ್ಥಿಯಾಗಿ ಕೆಲಸ ಮಾಡಿದರೆ ನಾವು ಚುನಾವಣೆ ಗೆಲ್ಲಲು ಸಾಧ್ಯ ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಠ್ಠಲ ಕೋಳೂರ ಮಾತನಾಡಿ, ನಾನು ಕ್ಷೇತ್ರದಲ್ಲಿ ಸಂಚಾರ ಮಾಡಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡಿದ್ದೇನೆ. ಟಿಕೆಟ್ ದೊರಕದಿದ್ದದ್ದು ನೋವಾದರೂ ಸಹ ನಾನು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಸಂಘಟನಾತ್ಮಕವಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

- Advertisement -

ಈ ಸಂದರ್ಭದಲ್ಲಿ ಮಲ್ಲಣ್ಣ ಸಾಲಿ, ಅಶೋಕ್ ವಾರದ, ಶರಣಪ್ಪ ವಾರದ, ರಾಜಶೇಖರ ಕೂಚಬಾಳ, ಮುಸ್ತಾಕ್ ಮುಲ್ಲಾ, ಗುರನಗೌಡ ಪಾಟೀಲ, ಶ್ರೀಶೈಲ್ ಬಿರಗೊಂಡ, ಎಂ.ಎ. ಖತೀಬ, ಡಾ. ರಾಜಶೇಖರ ಸಂಗಮ, ಅರವಿಂದ ಹಂಗರಗಿ, ಪರಶುರಾಮ ಕಾಂಬಳೆ, ರವಿರಾಜ  ದೇವರಮನಿ ಸೇರಿದಂತೆ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

- Advertisement -
- Advertisement -

Latest News

ಕವನ: ಹೆಮ್ಮೆ ಪಡು ಭಾರತೀಯ ಮನವೆ

  ಹೆಮ್ಮೆ ಪಡು ಭಾರತೀಯ ಮನವೆ ಹೆಮ್ಮೆ ಪಡು ಭಾರತೀಯ ಮನವೆ ಸ್ವಾಭಿಮಾನದ ಸೌಧ  ತಲೆಯೆತ್ತಿದೆಯೆಂದು ! ಕರ್ತವ್ಯ ಪಥದಲ್ಲಿಂದು ಭಾರತ ಮುನ್ನಡೆಯುತ್ತಿದೆಯೆಂದು ! ತಳ್ಳಿ ಬಿಡು  ಒಣ ಪೂರ್ವಗ್ರಹವ ಜೋತು ಬಿದ್ದ ಆ 'ಮನು' ಮನದ ಬಿಳಲಿನಿಂದ ಕೆಳಗಿಳಿ ಹೆಮ್ಮೆ...
- Advertisement -

More Articles Like This

- Advertisement -
close
error: Content is protected !!
Join WhatsApp Group