spot_img
spot_img

ಆರೋಗ್ಯಕರ ಬದುಕಿನ ಶೈಲಿಯಿಂದ ರೋಗ ಮುಕ್ತ ಜೀವನ ಸಾಧ್ಯ; ಡಾ. ಸೌಮ್ಯ

Must Read

- Advertisement -

ಸಿಂದಗಿ: ಆಧುನಿಕ ಜೀವನ ಶೈಲಿ ಮತ್ತು ಒತ್ತಡದಿಂದಾಗಿ ರೋಗ ನಿರೋಧಕ ಶಕ್ತಿ ಕಡಿಮೆಯಾಗಿ ಬಿ.ಪಿ, ಶುಗರ್ ದಂತಹ ಕಾಯಿಲೆಗಳು ಸಾಮಾನ್ಯವಾಗುತ್ತಿರುವುದು ಎಲ್ಲರಲ್ಲಿ ಆತಂಕ ಮೂಡಿಸುತ್ತಿವೆ ಎಂದು ಡಾ|| ಸೌಮ್ಯ ಮನಗೂಳಿ ಕಳವಳ ವ್ಯಕ್ತಪಡಿಸಿದರು.

ಪಟ್ಟಣದ ಎಚ್.ಜಿ.ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ತಾಲೂಕಾ ಆರೋಗ್ಯ ಇಲಾಖೆ  ಇವರ ಸಹಯೋಗದಲ್ಲಿ ವಿಶ್ವ ಮಧುಮೇಹ ದಿನಾಚರಣೆಯಲ್ಲಿ ಸಸಿಗೆ ನೀರುಣಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಆರಂಭದಿಂದಲೇ ಉತ್ತಮ ಆರೋಗ್ಯಕರ ಹವ್ಯಾಸಗಳನ್ನು ರೂಢಿಸಿಕೊಳ್ಳುವುದರ ಮೂಲಕ ತಮ್ಮ ದೈಹಿಕ, ಮಾನಸಿಕ ಸ್ವಾಸ್ಥ್ಯ ಕಾಪಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಆರೋಗ್ಯ ಶಿಕ್ಷಣಾಧಿಕಾರಿ ಎಸ್.ಡಿ.ಕುಲಕರ್ಣಿ ಮಾತನಾಡಿ, ಎಲ್ಲ ಸಂಪತ್ತುಗಳಲ್ಲಿ ಆರೋಗ್ಯ ಸಂಪತ್ತೇ ಶ್ರೇಷ್ಠ ಎಂದು ಹೇಳಿದರು.

- Advertisement -

ಆರೋಗ್ಯ ಶಿಕ್ಷಣಾಧಿಕಾರಿ ಕಲಾಲ ಅವರು ಕ್ಷಯ ರೋಗದ ಕುರಿತು ಅರಿವು ಮೂಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಮಾತನಾಡಿ, ಉತ್ತಮ ಆರೋಗ್ಯಕ್ಕಾಗಿ ಪೌಷ್ಠಿಕ ಆಹಾರ ಸೇವನೆ, ನಿಯಮಿತ ವ್ಯಾಯ್ಯಾಮ ಮಾಡುವುದರ ಮೂಲಕ ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳಬೇಕು ಎಂದು ಕರೆಕೊಟ್ಟರು.

ಈ ಸಂದರ್ಭದಲ್ಲಿ ಡಾ|| ಸೌಮ್ಯ ಮನಗೂಳಿ ಯವರ ತಂಡವು ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿ(ರಿ)ಯ ಎಲ್ಲ ಅಂಗಸಂಸ್ಥೆಗಳ ಬೋಧಕ-ಬೋಧಕೇತರ ಸಿಬ್ಬಂದಿಯವರ ಆರೋಗ್ಯ ತಪಾಸಣೆ ಮಾಡಿದರು.

- Advertisement -
- Advertisement -

Latest News

ಕವನ: ಹೆಮ್ಮೆ ಪಡು ಭಾರತೀಯ ಮನವೆ

  ಹೆಮ್ಮೆ ಪಡು ಭಾರತೀಯ ಮನವೆ ಹೆಮ್ಮೆ ಪಡು ಭಾರತೀಯ ಮನವೆ ಸ್ವಾಭಿಮಾನದ ಸೌಧ  ತಲೆಯೆತ್ತಿದೆಯೆಂದು ! ಕರ್ತವ್ಯ ಪಥದಲ್ಲಿಂದು ಭಾರತ ಮುನ್ನಡೆಯುತ್ತಿದೆಯೆಂದು ! ತಳ್ಳಿ ಬಿಡು  ಒಣ ಪೂರ್ವಗ್ರಹವ ಜೋತು ಬಿದ್ದ ಆ 'ಮನು' ಮನದ ಬಿಳಲಿನಿಂದ ಕೆಳಗಿಳಿ ಹೆಮ್ಮೆ...
- Advertisement -

More Articles Like This

- Advertisement -
close
error: Content is protected !!
Join WhatsApp Group