spot_img
spot_img

ಮೂಡಲಗಿಯಲ್ಲಿ ಅದ್ದೂರಿ ರಾಜ್ಯೋತ್ಸವ

Must Read

- Advertisement -

ಮೂಡಲಗಿ – ಮೂಡಲಗಿ ಪುರಸಭೆ ವತಿಯಿಂದ ೬೭ ನೇ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಪುರಸಭೆ ಆವರಣದಲ್ಲಿ ಅಧ್ಯಕ್ಷ ಹಣಮಂತ ಗುಡ್ಲಮನಿ ಹಾಗೂ ಉಪಾಧ್ಯಕ್ಷೆ ರೇಣುಕಾ ಹಾದಿಮನಿಯವರು ನಾಡ ದೇವಿಗೆ ಪೂಜೆ ಸಲ್ಲಿಸಿದರು. ನಂತರ ರಾಜ್ಯೋತ್ಸವ ಮೆರವಣಿಗೆಗೆ ಚಾಲನೆ ನೀಡಲಾಯಿತು.

ರಾಜ್ಯೋತ್ಸವ ಹಬ್ಬದ ಅದ್ದೂರಿ ಮೆರವಣಿಗೆಯಲ್ಲಿ ನಗರದ ಎಲ್ಲ ಶಾಲೆಗಳ ವಿದ್ಯಾರ್ಥಿ ವಿದ್ಯಾರ್ಥಿನಿಯರು ವಿವಿಧ ಬಗೆಯ ರೂಪಕಗಳೊಂದಿಗೆ ಪಾಲ್ಗೊಂಡು ಉತ್ಸವಕ್ಕೆ ಮೆರುಗು ತಂದರು.  ಶಿಕ್ಷಕ ಶಿಕ್ಷಕಿಯರೆಲ್ಲ ಉತ್ಸಾಹದಿಂದ ಮೆರವಣಿಗೆಯುದ್ದಕ್ಕೂ ಭಾಗವಹಿಸಿದ್ದರು.

- Advertisement -

ತಾಲೂಕಾಡಳಿತದಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ ಡಿ ಜಿ ಮಹಾತ್, ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ, ತಾ. ಪಂ. ಕಾರ್ಯ ನಿರ್ವಾಹಕ ಅಧಿಕಾರಿ ಎಫ್ ಜಿ ಚಿನ್ನನ್ನವರ, ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ, ಪುರಸಭೆಯ ಪ್ರಭಾರಿ ಮುಖ್ಯಾಧಿಕಾರಿ ಸಿ ಬಿ ಪಾಟೀಲ, ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿ ಯಲ್ಲಪ್ಪ ಗದಾಡಿ, ಉಪ ತಹಶೀಲ್ದಾರ ಶಿವಾನಂದ ಬಬಲಿ, ಆರೋಗ್ಯಾಧಿಕಾರಿ ಚಿದಾನಂದ ಮುಗಳಖೋಡ ಸೇರಿದಂತೆ ಹಲವು ಮುಖಂಡರು, ಪುರಸಭಾ ಸದಸ್ಯರುಗಳು ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ಸೈಕಲ್ ಮೇಲೆ ಕನ್ನಡದ ಕೈಂಕರ್ಯ ಹೊತ್ತ ಪಾಂಡುರಂಗ ಬುದ್ನಿ ಗಮನ ಸೆಳೆದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group