ಸಂವಿಧಾನ ಜಾಗೃತಿ ಜಾಥಾಕ್ಕೆ ಅದ್ದೂರಿ ಸ್ವಾಗತ

Must Read

ಸಿಂದಗಿ: ತಾಲೂಕಿನ ಮೊದಲ ಗ್ರಾಮ ಪಂಚಾಯತ್ ಯರಗಲ ಬಿಕೆ ಗ್ರಾಮ ಪಂಚಾಯಿತಿಗೆ ಆಗಮಿಸಿದ ಸಂವಿಧಾನ ಜಾಗೃತಿ ರಥಕ್ಕೆ ಶಾಸಕ ಅಶೋಕ ಮನಗೂಳಿ ಯವರು ಮಾಲಾರ್ಪಣೆ ಮಾಡುವ ಮೂಲಕ  ಕಾರ್ಯನಿರ್ವಾಹಕ ಅಧಿಕಾರಿಗಳು, ತಹಸೀಲ್ದಾರ್ ರು ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಅದ್ದೂರಿಯಾಗಿ ಸ್ವಾಗತಿಸಿದರು.

ಜಾಥಾವು ಚಿಕ್ಕ ಯರಗಲ್ ಯಿಂದ  ಯರಗಲ್ ಬಿಕೆ ಗ್ರಾಮ ಪಂಚಾಯಿತಿ ರಸ್ತೆ ಮಾರ್ಗವಾಗಿ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು, ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು, ಮತ್ತು ವಿವಿಧ ಕಲಾ ತಂಡಗಳ ಮೂಲಕ ನೃತ್ಯ ಪ್ರದರ್ಶನದೊಂದಿಗೆ ಮೆರವಣಿಗೆ ಸಾಗಿತು..

ಸಂವಿಧಾನ ಪೀಠಿಕೆಯನ್ನು ತಹಶೀಲ್ದಾರ ಪ್ರದೀಪಕುಮಾರ ಹಿರೇಮಠ ಬೋಧನೆ ಮಾಡಿದರು. 

ಕಾರ್ಯಕ್ರಮದಲ್ಲಿ ಚಿತ್ರಕಲೆ ಪ್ರಬಂಧ ರಸಪ್ರಶ್ನೆ, ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಣೆ ಮಾಡಲಾಯಿತು.

ಬ್ಲಾಕ್ ಕಾಂಗ್ರೆಸ ಸಮಿತಿ ಅದ್ಯಕ್ಷ ಸುರೇಶ ಪೂಜಾರಿ, ದಸಂಸ ಜಿಲ್ಲಾ ಸಂಚಾಲಕ ವೈ.ಸಿ.ಮಯೂರ ಮಾತನಾಡಿದರು.

ಈ ಸಂದರ್ಭ ಮಾಜಿ ಜಿಪಂ ಸದಸ್ಯ ಮಹಾಂತಗೌಡ ಪಾಟೀಲ, ಮಂಜು ಬಿಜಾಪುರ, ಲೋಕೋಪಯೋಗಿ ಇಲಾಖೆಯ ಎಇಇ ತಾರಾನಾಥ ರಾಠೋಡ, ಬಸವರಾಜ ಯರನಾಳ, ಇರ್ಫಾನ ತಲಕಾರಿ, ಸೇರಿದಂತೆ ತಾಲೂಕು ಮಟ್ಟದ ಅಧಿಕಾರಿಗಳು, ನೂಡಲ್ ಅಧಿಕಾರಿಗಳ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಿಕ್ಷಕರು, ಸ್ವಸಹಾಯ ಸಂಘಗಳ ಮುಖ್ಯಸ್ಥರು, ಆಶಾ ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು, ಶಾಲಾ ಮಕ್ಕಳು ಹಾಗೂ . ರವಿ ಹೋಳಿ ಸೇರಿದಂತೆ, ಅನೇಕ ಜನರು ಉಪಸ್ಥಿತರಿದ್ದರು.

Latest News

ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಸಂವಿಧಾನವೇ ಆಧಾರ – ಈರಣ್ಣ ಕಡಾಡಿ

ಮೂಡಲಗಿ: ಬಲಿಷ್ಠ ಪ್ರಜಾಪ್ರಭುತ್ವ ಮೌಲ್ಯಗಳಿಗೆ ನಮ್ಮ ದೇಶದ ಶ್ರೇಷ್ಟ ಸಂವಿಧಾನವೇ ಆಧಾರ ಸ್ತಂಭವಾಗಿದೆ. ಪವಿತ್ರ ಸಂವಿಧಾನದ ಮೌಲ್ಯಗಳನ್ನು ಸದಾ ಪಾಲಿಸುವ ಜೊತೆಗೆ ದೇಶದ ಏಕತೆ, ವೈವಿಧ್ಯತೆ...

More Articles Like This

error: Content is protected !!
Join WhatsApp Group