spot_img
spot_img

ಕಪ್ಪತ್ತಗುಡ್ಡ ರಕ್ಷಣೆಗೆ ಮುಖ್ಯಮಂತ್ರಿಗೆ ಆಗ್ರಹ ಪತ್ರ

Must Read

spot_img
- Advertisement -

ಗದಗ ಜಿಲ್ಲೆ ಕಪ್ಪತಗುಡ್ಡದ ಇಡೀ ೮೦,೦೦೦ ಎಕರೆ ಅರಣ್ಯ ಪ್ರದೇಶವನ್ನು ಸಂರಕ್ಷಿತ ಜೀವ ವೈವಿಧ್ಯತಾ ತಾಣವನ್ನಾಗಿ ವಿಸ್ತರಿಸುವುದು ಮತ್ತು ಅದರ ಪರಿಧಿಯ ೧೦ ಕಿಲೋ ಮೀಟರ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ಕೈಗೊಳ್ಳದಂತೆ ನಿಷೇಧಿಸಲು ಸರಕಾರವನ್ನು ಒತ್ತಾಯಿಸಲು ಕಪ್ಪತಗುಡ್ಡ ಶ್ರೀ ನಂದಿವೇರಿ ಸಂಸ್ಥಾನ ಮಠದ ಪೂಜ್ಯ ಶಿವಕುಮಾರ ಮಹಾಸ್ವಾಮಿಗಳ ನೇತೃತ್ವದಲ್ಲಿ ಹಾಗೂ ಅನೇಕ ಪರಿಸರ ಸಂರಕ್ಷಣಾ ಕಾರ್ಯದಲ್ಲಿ ತೊಡಗಿರುವ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೆಳಗಾವಿ ವಿಭಾಗೀಯ ಆಯುಕ್ತರ ಮೂಲಕ  ಮುಖ್ಯಮಂತ್ರಿಗಳಿಗೆ ಆಗ್ರಹ ಪತ್ರವನ್ನು ಗುರುವಾರ ದಿನಾಂಕ: ೨೧/೧೧/೨೦೨೪ ರಂದು ಬೆಳಿಗ್ಗೆ ೧೦-೩೦ ಕ್ಕೆ ಕೊಡಲಾಗುವುದು.

ಕಪ್ಪತಗುಡ್ಡದ ಸಂರಕ್ಷಣಾ ವಿಷಯದಲ್ಲಿ ಮಲತಾಯಿ ಧೋರಣೆಯನ್ನು ಅನುಸರಿಸಿ ಆಗಾಗ ಸಂಕಷ್ಟಗಳನ್ನು ಸೃಷ್ಟಿಸುತ್ತಿರುವ ಕರ್ನಾಟಕ ಸರ್ಕಾರದ ಧೋರಣೆಯನ್ನು ತೀವ್ರವಾಗಿ ವಿರೋಧಿಸುತ್ತೇವೆ. ಕಪ್ಪತಗುಡ್ಡದ ನೆಲ, ಜಲ ಜಾನುವಾರಗಳ ಹಾಗೂ ಜೀವ ವೈವಿಧ್ಯತೆಗಳ ಸಂರಕ್ಷಣೆಗಾಗಿ ಬದ್ಧವಿರಬೇಕಿದ್ದ ಸರಕಾರವು ಹಿತ್ತಲು ಬಾಗಿಲಿನಿಂದ ಗಣಿಗಾರಿಕೆಗೆ ಅವಕಾಶ ನೀಡುವ ಹುನ್ನಾರದೊಂದಿಗೆ ನೀತಿ ರೂಪಿಸಿ ಜನಸಾಮಾನ್ಯರ ಕಣ್ಣು ಒರೆಸುವ ತಂತ್ರ ಅನುಸರಿಸುತ್ತಿರುವುದು ತುಂಬಾ ದುರದೃಷ್ಟಕರ ವಿಷಯವಾಗಿದೆ.

ಗಣಿಗಾರಿಕೆಗೆ ಅನುವು ಮಾಡಿಕೊಡುವ ಉದ್ದೇಶದಿಂದ ಈ ಹಿಂದೆ ಸರಕಾರವು ವ್ಯತಿರಿಕ್ತ ಆದೇಶ ಹೊರಡಿಸಿ ಕೈಸುಟ್ಟುಕೊಂಡು, ತೋಂಟದ ಸಿದ್ಧಲಿಂಗ ಮಹಾಸ್ವಾಮಿಗಳ ಮತ್ತು ಕಪ್ಪತಗುಡ್ಡ ಶ್ರೀ ನಂದಿವೇರಿ ಸಂಸ್ಥಾನ ಮಠದ ಪೂಜ್ಯ ಶಿವಕುಮಾರ ಮಹಾಸ್ವಾಮಿಗಳ ಹಾಗೂ ಇನ್ನಿತರ ೫೦ ಕ್ಕೂ ಹೆಚ್ಚು ಮಠಾಧೀಶರ ನೇತೃತ್ವದಲ್ಲಿ ಹಾಗೂ ಗದಗ ಜಿಲ್ಲೆಯ ಅನೇಕ ನಾಗರಿಕ ಸಂಘಟನೆ ಮತ್ತು ಸಾರ್ವಜನಿಕರ ಹೋರಾಟದ ತೀವ್ರತೆಗೆ ಮಣಿದ ಸರ್ಕಾರ ಕಪ್ಪತಗುಡ್ಡದ ಕೆಲವೇ ಕೆಲವು ಭಾಗವನ್ನು ಜೀವ ವೈವಿಧ್ಯತಾ ತಾಣವೆಂದು ಘೋಷಿಸಿ ಮುಜುಗರದಿಂದ ಪಾರಾಗಲು ಮೂಗಿಗೆ ತುಪ್ಪ ಸವರುವ ಕಾರ್ಯ ಮಾಡಿದಾಗ ಹೋರಾಟ ತಾತ್ಪೂರ್ತಿಕವಾಗಿ ಸ್ಥಗಿತವಾಗಿದ್ದು ಈಗ ಇತಿಹಾಸ.

- Advertisement -

ಸಾರ್ವಜನಿಕರ ನೆನಪು ಮಾಸಿದೆಯೆಂದು ಭಾವಿಸಿರುವ ಸರ್ಕಾರ ಮತ್ತದೇ ಹಳೇ ಚಾಳಿ ಮುಂದುವರೆಸಿ ಮತ್ತೆ ಕಪ್ಪತಗುಡ್ಡದಲ್ಲಿ ಗಣಿಗಾರಿಕೆ ನಡೆಸಲು ರತ್ನಗಂಬಳಿ ಹಾಸುತ್ತಿರುವುದು ತುಂಬಾ ಕಳವಳಕಾರಿಯಾಗಿದೆ. ಬಿರುಗಾಳಿಯ ನಂತರದ ಪ್ರಶಾಂತ ವಾತಾರವಣವನ್ನು ತಪ್ಪಾಗಿ ಭಾವಿಸಿರುವ ಸರಕಾರವು ಜೇನು ಗೂಡಿಗೆ ಕೈಹಾಕಿದ್ದು ಈ ಭಾಗದ ಜನರ ರೋಷಕ್ಕೆ ಕಾರಣವಾಗಿದ್ದು ಜನಸಾಮಾನ್ಯರು ಸಿಡಿದೆದ್ದು ಸರ್ಕಾರ ಮತ್ತೊಮ್ಮೆ ಮುಜುಗರಕ್ಕೆ ಈಡಾಗುವುದರಲ್ಲಿ ಎರಡು ಮಾತಿಲ್ಲ.

ಸಾಮಾಜಿಕ ಜಾಲತಾಣದ ಪ್ರಾಬಲ್ಯ ಅಷ್ಟೊಂದು ತೀವ್ರವಾಗಿರದ ಅಂದಿನ ದಿನಮಾನಗಳಲ್ಲಿ ವ್ಯಕ್ತವಾದ ಪ್ರತಿಭಟನೆಯನ್ನು ಸರ್ಕಾರ ಮರೆತಂತೆ ನಟಿಸಿದರೆ ಮತ್ತೆ ಮತ್ತೆ ತೀವ್ರ ಮುಖಭಂಗ ಅನುಭವಿಸಬೇಕಾಗುತ್ತದೆ.
ಸಾಮಾಜಿಕ ಜಾಲ ತಾಣದ ಬೃಹತ್ ಶಕ್ತಿ ೨೪ ಘಂಟೆಗಳ ಅವಧಿಯಲ್ಲಿ ಲಕ್ಷಾಂತರ ಜನರು ಸರ್ಕಾರದ ವಿರುದ್ಧ ಹೋರಾಟಕ್ಕೆ ಸನ್ನದ್ಧಗೊಳ್ಳುವ ಅಪಾಯದ ಅರಿವು ಇಂಟಲಿಜೆನ್ಸ್ ಇಲಾಖೆಯ ಮೂಲಕ ತಿಳಿದಿದ್ದರೂ ಮತ್ತೆ ಗಣಿಗಾರಿಕೆಗೆ ಅನುಮತಿ ನೀಡಲು ಸರಕಾರ ಹವಣಿಸುತ್ತಿರುವದು ಗಣಿಲಾಬಿಯ ಒತ್ತಡ ಎಷ್ಟಿರಬಹುದೆಂದು ಅಂದಾಜಿಸಲಾರದಷ್ಟು ಜನಸಾಮಾನ್ಯರು ಅಜ್ಞರಲ್ಲವೆಂಬುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕೆಂದು ನಾವು ಒತ್ತಾಯಿಸುತ್ತೇವೆ.

ಇದಕ್ಕಿರುವ ಒಂದೇ ಶಾಶ್ವತ ಪರಿಹಾರವೆಂದರೆ, ಕಪ್ಪತ ಗುಡ್ಡದ ಇಡೀ ೮೦,೦೦೦ ಎಕರೆ ಅರಣ್ಯ ಪ್ರದೇಶವನ್ನು ಸಂರಕ್ಷಿತ ಜೀವ ವೈವಿಧ್ಯತಾ ತಾಣವೆಂದು ಘೋಷಿಸಿ ಸುತ್ತಲೂ ಸಮಾನಾಂತರವಾಗಿ ೧೦ ಕಿಲೋಮೀಟರ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ತಡೆಯುವ ಕ್ರಮ ಕೈಗೊಳ್ಳುವುದಾಗಿದೆ.

- Advertisement -

ಇತ್ತೀಚೆಗೆ ಗಣಿಗಾರಿಕೆಗೆ ಅನುಮತಿ ನಿಡುವ ಪ್ರಸ್ತಾವನೆಗಳ ಮೇಲೆ ನಿರ್ಧಾರ ಕೈಗೊಳ್ಳುವುದನ್ನು ಸರ್ಕಾರ ಮುಂದೂಡಿದೆ ವಿನ: ಕೈಬಿಟ್ಟಿಲ್ಲ, ಇದೊಂದು ಇಬ್ಬಗೆಯ ನೀತಿಯಾಗಿದ್ದು ಕಪ್ಪತಗುಡ್ಡದ ಮೇಲೆ ಸರ್ಕಾರದ ತೂಗುಗತ್ತಿ ಇದ್ದು ಯಾವುದೇ ಕ್ಷಣದಲ್ಲಿ ಸರ್ಕಾರ ತಪ್ಪು ನಿರ್ಧಾರ ಕೈಗೊಳ್ಳುವ ಅಪಾಯವಿದ್ದೇ ಇದೆ.

ಕಪ್ಪತಗುಡ್ಡದ ಸಂರಕ್ಷಣೆಗೆ ಇಂದು ಜಾಗೃತ ಸಮಾಜ ಟೊಂಕ ಕಟ್ಟಿ ನಿಂತಿರುವುದರಿAದ ಯಾವಕಾಲಕ್ಕೂ ಗಣಿಗಾರಿಕೆ ನಡೆಸಲು ಬಿಡಲಾರೆವೆಂಬ ಸಾರ್ವಜನಿಕ ಸಂಕಲ್ಪವು ಸರಕಾರಗಳನ್ನೇ ಆಹುತಿ ತೆಗೆದುಕೊಳ್ಳುವುದರಲ್ಲಿ ಸಂಶಯವಿಲ್ಲ.

ಇನ್ನಾದರೂ ಸರ್ಕಾರವು “ಗಣಿಗಾರಿಕೆ ಆಟ” ಎಂಬ ಪ್ರಹಸನವನ್ನು ಕೂಡಲೇ ನಿಲ್ಲಿಸಿ ಕಪ್ಪತಗುಡ್ಡದ ಪರಿಸರ ಸಂರಕ್ಷಿಸಲು ದೀರ್ಘಾವಧಿ ಯೋಜನೆಗಳನ್ನು ಹಮ್ಮಿಕೊಳ್ಳುವ ದಿಸೆಯಲ್ಲಿ ಮುನ್ನುಗ್ಗದೇ, ವ್ಯತಿರಿಕ್ತವಾಗಿ ಹೋರಾಟದ ಕಿಚ್ಚಿನ ಆಳ ಅಗಲವನ್ನು ನಿರ್ಲಕ್ಷಿಸಿ ಮುಂದುವರೆದಿದ್ದೆ ಆದಲ್ಲಿ ಸರ್ಕಾರವು ಪದೇ ಪದೇ ಸಾರ್ವಜನಿಕರ ಆಕ್ರೋಷಕ್ಕೆ ಈಡಾಗುತ್ತದೆಬುದನ್ನು ಈ ಮೂಲಕ ಸರ್ಕಾರದ ಗಮನಕ್ಕೆ ತರಬಯಸುತ್ತೇವೆ.

ಕಪ್ಪತಗುಡ್ಡದ ಜೊತೆಗೆ ಲಕ್ಷಾಂತರ ಜನರ ಭಾವಬಂಧ ಬೆಸೆಯುವ ಕಾರ್ಯವು ಚಾಲನೆಯಲ್ಲಿದ್ದು, ಕಪ್ಪತಗುಡ್ಡದ ವಿನಾಶವನ್ನು ಕನಸಿನಲ್ಲೂ ಸಹಿಸಲಾರದ ಲಕ್ಷಾಂತರ ಜನ ಹೋರಾಟಕ್ಕಿಳಿಯುತ್ತಾರೆಂಬುದನ್ನನುಲಕ್ಷಿಸಿ ಸಂರಕ್ಷಣೆ ನಿಟ್ಟಿನಲ್ಲಿ ಸೂಕ್ತ ಮಾರ್ಗವನ್ನು ಅನುಸರಿಸಬೇಕೆಂದು ಆಗ್ರಹಪೂರಕವಾಗಿ ಒತ್ತಾಯಿಸುತ್ತೇವೆ.

ಈ ಕಾರ್ಯಕ್ರಮದಲ್ಲಿ, ಹುಬ್ಬಳ್ಳಿ ಧಾರವಾಡ ನಾಗರಿಕ ಪರಿಸರ ಸಮೀತಿ, ಪರಿಸರಕ್ಕೆ ನಾವು ರಾಜ್ಯ ಸಂಘಟನೆ, ಧಾರವಾಡ ಕೃಷಿ ವಿಶ್ವ ವಿದ್ಯಾಯಯದ ಹಳೆ ವಿದ್ಯಾರ್ಥಿಗಳ ಸಂಘಟನೆ, ಕಾನೂನೂ ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಆಯುರ್ವೇದ ಮಹಾವಿದ್ಯಾಯಗಳ ವಿದ್ಯಾರ್ಥಿಗಳು, ಗದಗ, ಧಾರವಾಡ, ಹಾವೇರಿ, ಬಾಗಲಕೋಟ, ಬೆಳಗಾವಿ ಜಿಲ್ಲೆಗಳ ಪರಿಸರಾಸಕ್ತರು ಭಗವಹಿಸಲಿದ್ದಾರೆ.

ಪೂಜ್ಯ ಶಿವಕುಮಾರ ಮಹಾಸ್ವಾಮಿಗಳೊಂದಿಗೆ ಭಾಲಚಂದ್ರ ಜಾಬಶೆಟ್ಟಿ, ಶಂಕರ ಕುಂಬಿ, ರುದ್ರಣ್ಣ ಗುಳಗುಳಿ, ಎಮ್.ವಾಯ್.ಮೆಣಶಿನಕಾಯಿ, ಶಾರದಾ ಗೋಪಾಲ, ಅನಿತಾ ಪಾಟೀಲ, ಸರಸ್ವತಿ ಪೂಜಾರ, ಸುಭದ್ರಾ ಕುಲಕರ್ಣಿ, ನೈಲಾ ಕೋಯ್ಲೋ, ಕೆ.ಎಸ್.ನಾಯಕ, ಪರಿಮಳಾ ಜಕ್ಕಣ್ಣವರ, ಆರ್.ಜಿ. ತಿಮ್ಮಾಪೂರ, ಸ್ವಪ್ನಾ ಕರಬಶೆಟ್ಟರ, ಅಸ್ಲಮ್ ಅಬ್ಬಿಹಾಳ, ಮುಂತಾದವರು ಭಾಗವಹಿಸಲಿದ್ದಾರೆ.

ಭಾಲಚಂದ್ರ ಜಾಬಶೆಟ್ಟಿ

- Advertisement -

LEAVE A REPLY

Please enter your comment!
Please enter your name here

- Advertisement -

Latest News

ದೂರದೃಷ್ಟಿಯ ನಾಯಕ ಎಸ್ ಎಮ್ ಕೃಷ್ಣ

ಸಿಂದಗಿ: ಸರಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಿಯೇ ಕಾರಣ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ್...
- Advertisement -

More Articles Like This

- Advertisement -
close
error: Content is protected !!
Join WhatsApp Group