ಬೀದರ – ವಿವಾಹಿತ ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹುಮನಾಬಾದ್ ಪಟ್ಟಣದ ಕೈಗಾರಿಕಾ ಪ್ರದೇಶ ಸತ್ಯದೀಪ ರಾಸಾಯನಿಕ ಕಾರ್ಖಾನೆಯ ಹಿಂಬದಿ ತೋಟ ಒಂದರಲ್ಲಿ ಶುಕ್ರವಾರ ಸಂಭವಿಸಿದೆ.
ಕಲ್ಬುರ್ಗಿ ಮೂಲದ ಚಿದಾನಂದ ಕಾಶೆಪ್ಪ ಗವಾರೆ(43) ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಎಂದು ಪೊಲೀಸ ಮೂಲಗಳು ತಿಳಿಸಿವೆ.
ಆತ್ಮಹತ್ಯೆಗೆ ಶರಣಾದ ವ್ಯಕ್ತಿ ಹುಮನಾಬಾದ್ ಭಾರತ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದ್ದು ಈತನಿಗೆ ಇಬ್ಬರು ಮಕ್ಕಳಿದ್ದಾರೆ. ವ್ಯಕ್ತಿಯ ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಘಟನೆ ಕುರಿತು ಹುಮನಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.