ರಾಜ್ಯದಲ್ಲಿ ವೈಜ್ಞಾನಿಕ ಆಕಾಡೆಮಿ ಸ್ಥಾಪನೆ ಮಾಡಲು ಮುಖ್ಯಮಂತ್ರಿಗಳಿಗೆ ಮನವಿ

Must Read

ಬೆಳಗಾವಿ: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ರಾಜ್ಯ ಘಟಕದ ವತಿಯಿಂದ ರಾಜ್ಯದಲ್ಲಿ ಸಾರ್ವಜನಿಕರಲ್ಲಿನ ಮೌಢ್ಯತೆಯನ್ನು ನಿವಾರಣೆ ಮಾಡುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೌಢ್ಯ ಮುಕ್ತ ವೈಜ್ಞಾನಿಕ ಅಕಾಡೆಮಿ ಸ್ಥಾಪನೆ ಮಾಡುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಅರ್ಪಿಸಲಾಯಿತು.

ರಾಜ್ಯಾಧ್ಯಕ್ಷರಾದ ಡಾ, ಹುಲಿಕಲ್ ನಟರಾಜ್ ರವರ ನಿರ್ದೇಶನದ ಮೇರೆಗೆ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷರಾದ ಸಂಗಮೇಶ ಖನ್ನಿ ನಾಯ್ಕರ, ಪದಾಧಿಕಾರಿಗಳಾದ ಜನಪರ ಚಿಂತಕರಾದ ಡಾ ಜಗದೀಶ ಹಾರುಗೊಪ್ಪ, ಶ್ರೀಮತಿ ಕೆ ಎಸ್ ಗಣಾಚಾರಿ,ಬಸವರಾಜ ಕೋಲಕಾರ, ಜಿಲ್ಲಾ ನೌಕರರ ಕ್ಷೇಮಾಭಿವೃದ್ಧಿ ಸಂಘದ ಜಿಲ್ಲಾಧ್ಯಕ್ಷರಾದ ಸುರೇಶ ಸಕ್ರೆನವರ, ಮುಖ್ಯಶಿಕ್ಷಕರು ಸಾಹಿತಿಗಳು, ಸಂಘಟಕರಾದ ಬಸವರಾಜ ಸುಣಗಾರ ಸೇರಿದಂತೆ ಹಲವರು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ರಾಜ್ಯದಲ್ಲಿ ಜನರಲ್ಲಿ ಮೌಢ್ಯ, ಮೂಢನಂಬಿಕೆ ಹೋಗಲಾಡಿಸಲು ಕಾನೂನಿನ ಜಾಗೃತಿ ಮೂಡಿಸಬೇಕಾಗಿದೆ ಅ ನಿಟ್ಟಿನಲ್ಲಿ ವೈಜ್ಞಾನಿಕ ಅಕಾಡೆಮಿ ಸ್ಥಾಪನೆ ಅವಶ್ಯಕತೆ ಇದೆ ವೈಜ್ಞಾನಿಕ ಕಾರ್ಯಕ್ರಮಗಳಿಗೆ ಸರಕಾರದಿಂದ ಸಹಾಯಧನ ಪ್ರತಿವರ್ಷ ನೀಡಬೇಕು, ರಾಜ್ಯದಲ್ಲಿ ವೈಜ್ಞಾನಿಕ ವಿಶ್ವ ವಿದ್ಯಾಲಯ ಸ್ಥಾಪಿಸಬೇಕು ವಿಜ್ಞಾನ ಸಿರಿ ಮಾಸಪತ್ರಿಕೆ ಎಲ್ಲೆಡೆ ದೊರೆಯುವಂತೆ ಮಾಡಬೇಕು, ವಿಜ್ಞಾನ ಗ್ರಾಮ ಗ್ರಾಮ ಸ್ಥಾಪನೆಗೆ ಅನುದಾನ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳನ್ನು ಮನವಿಯಲ್ಲಿ ಮಂಡಿಸಲಾಗಿದೆ.

ಮನವಿ ಸ್ವೀಕರಿಸಿದ ಅಧಿಕಾರಿಗಳು ಮುಂದಿನ ಕ್ರಮಗಳಿಗಾಗಿ ಮುಖ್ಯಮಂತ್ರಿಗಳಿಗೆ ಕಳಿಸುವ ಭರವಸೆ ನೀಡಿದರು.

Latest News

ಗಾಳಿಪಟದ ಮಾಂಜಾ ದಾರ ಕುತ್ತಿಗೆಗೆ ಸಿಲುಕಿ ವ್ಯಕ್ತಿ ದಾರುಣ ಸಾವು

ಬೀದರ - ಮಕರ ಸಂಕ್ರಾಂತಿ ನಿಮಿತ್ತ ಗಾಳಿಪಟ ಹಾರಿಸುತ್ತಿರುವ ಸಂದರ್ಭದಲ್ಲಿ ರಸ್ತೆಯಲ್ಲಿ ಬೈಕ್ ಮೇಲೆ ಹೋಗುತ್ತಿದ್ದ ಯುವಕ ಸಂಜಿಕುಮಾರ ಎಂಬುವವರ ಕುತ್ತಿಗೆಗೆ ಗಾಳಿ ಪಟದ ಮಾಂಜಾ(ಚೀನಿ...

More Articles Like This

error: Content is protected !!
Join WhatsApp Group