ಸಿಂದಗಿ: ಅಕ್ಟೋಬರ್ 1 ರಂದು ರಾಜ್ಯ ಸರಕಾರಿ ನೌಕರರ ಸಂಘದ ಸರ್ವ ಸದಸ್ಯರ ವಿಶೇಷ ಮಹಾಸಭೆ ಕೊಪ್ಪಳದ ಹಿರೆಸಿಂಧೋಗಿ ರಸ್ತೆಯ ಮಹಾವೀರ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 11 ಗಂಟೆಗೆ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ರವರ ಅಧ್ಯಕ್ಷತೆಯಲ್ಲಿ ವಾಸ್ತವ ಹಾಗೂ ವರ್ಚುವಲ್ ಮೂಲಕ ನಡೆಯಲಿದೆ ಎಂದು ಸಿಂದಗಿ ತಾಲೂಕ ನೌಕರರ ಸಂಘದ ಅಧ್ಯಕ್ಷರು ಹಾಗೂ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ .ಸಿ. ತೆಲ್ಲೂರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು. ಸಭೆಯಲ್ಲಿ ಸಂಘದ ಬೈಲಾ ಉಪವಿಧಿಗಳು 2022 ರ ಕೆಲವು ಉಪ ವಿಧಿಗಳಿಗೆ ತಿದ್ದುಪಡಿ ತರಲು ಉದ್ದೇಶಿಸಿದ್ದು ಸದರಿ ಸಭೆಯಲ್ಲಿ ನಮ್ಮ ತಾಲೂಕಿನ ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಅಧಿಕಾರಿಗಳ ವೃಂದ, ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನೌಕರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ವಿಶೇಷ ಮಹಾಸಭೆಯ ಹೆಚ್ಚಿನ ಮಾಹಿತಿಗೆ ತಾಲೂಕು ಸಂಘದ ಅಧ್ಯಕ್ಷರು ಹಾಗೂ ಕಾರ್ಯದರ್ಶಿ, ಪದಾಧಿಕಾರಿಗಳನ್ನು ಸಂಪರ್ಕಿಸಲು ಕೋರಿದ್ದಾರೆ.