spot_img
spot_img

ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಸೇರಿ ಒಟ್ಟು ೭ ಜನರ ಸಾವು

Must Read

ಬೀದರ – ಐಷರ್ ಟ್ರಕ್ ಹಾಗೂ ಆಟೋ ನಡುವೆ ನಡೆದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮಹಿಳೆಯರು ಸೇರಿ ಒಟ್ಟು ೭ ಜನರ ಸಾವಾಗಿದೆ.

ನಿನ್ನೆ(ಶುಕ್ರವಾರ) ಐವರು ಸ್ಥಳದಲ್ಲಿಯೇ ಮೃತಪಟ್ಟಿದರು. ಗಾಯಾಳುಗಳು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಇಂದು(ಶನಿವಾರ) ಮಂಜುಳಾ(35 ಈಶ್ವರಿ(42) ಎಂಬ ಇಬ್ಬರು ಸಾವನ್ನಪ್ಪಿದ್ದಾರೆ.

ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಬೆಮ್ಮಳಖೇಡ ಗ್ರಾಮದ ಬಳಿ ಶುಕ್ರವಾರ ಐಷರ್ ಟ್ರಕ್ ಹಾಗೂ ಆಟೋ ನಡುವೆ ನಡೆದ ಭೀಕರ ಅಪಘಾತ ಸಂಭವಿಸಿತ್ತು.

ಅಫಘಾತದಲ್ಲಿ ಒಂದೇ ಕುಟುಂಬದ ಪ್ರಭಾವತಿ (36), ಯಾದಮ್ಮ (40), ಗುಂಡಮ್ಮ (52), ಜಕ್ಕಮ್ಮ (32), ರುಕ್ಮಿಣಿ (60) ಈಶ್ವರಮ್ಮಾ(45) ಸಾವೀಗೀಡಾಗಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಈಶ್ವರಿ ಬಕ್ಕಪ್ಪ(55) ಹಾಗೂ ಪಾರ್ವತಿ ಮಾರುತಿ(42) ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ದುರ್ಘಟನೆಯಲ್ಲಿ ಗಾಯಗೊಂಡವರನ್ನ ಬೀದರ್ ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತಪಟ್ಟ 7 ಮಹಿಳೆಯರು 6 ಜನ‌ ಗಾಯಾಳುಗಳು ಉಡಮನಳ್ಳಿ ಗ್ರಾಮದವರಾಗಿದ್ದಾರೆ. ಬೆಮಳಖೇಡಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -
- Advertisement -

Latest News

ನಿಪ್ಪಾಣಿ ನಗರಸಭೆಯ ಮೇಲಿನ ಭಗವಾಧ್ವಜ ತೆರವುಗೊಳಿಸಲು ಗಡಾದ ಆಗ್ರಹ

ಮೂಡಲಗಿ - ಸುಮಾರು ೩೧ ವರ್ಷಗಳಿಂದ ಬೆಳಗಾವಿಯ ನಿಪ್ಪಾಣಿ ನಗರಸಭೆಯ ಕಟ್ಟಡದ ಮೇಲೆ ಅನಧಿಕೃತವಾಗಿ ಹಾರಾಡುತ್ತಿರುವ ಭಗವಾ ಧ್ವಜವನ್ನು ತೆರವುಗೊಳಿಸಬೇಕು ಎಂದು ಮನವಿ ಸಲ್ಲಿಸಿ ಒಂದು...
- Advertisement -

More Articles Like This

- Advertisement -
close
error: Content is protected !!