ಬೀದರ: ಗಡಿ ಜಿಲ್ಲೆ ಬೀದರ್ ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಜೆಸ್ಕಾಂ ಸಿಬ್ಬಂದಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಂಭವಿಸಿದೆ
ಸ್ಕಾರ್ಪಿಯೋ ಕಾರು ಹಾಗೂ ಬೈಕ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ಬೈಕ್ ಸವಾರರಾದ ಸಿದ್ದು ( 42) ಹಾಗೂ ಸುಕದೇವ್ (45) ಸಾವನ್ನಪ್ಪಿದ ದುರ್ದೈವಿಗಳು. ಇವರಿಬ್ಬರೂ ಜೆಸ್ಕಾಂ ಇಲಾಖೆಯಲ್ಲಿ ಬಿಲ್ ಕಲೆಕ್ಟರ್ ಆಗಿ ಕೆಲಸ ಮಾಡುತ್ತಿದ್ದರೆನ್ನಲಾಗಿದೆ.
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಧರಿಹನುಮಾನ್ ಕ್ರಾಸ್ ಬಳಿ ಘಟನೆ ನಡೆದಿದೆ. ವೇಗವಾಗಿ ಬಂದ ಸ್ಕಾರ್ಪಿಯೋ ಕಾರು ಬೈಕ್ ಗೆ ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಮೂಲತಃ ದೂಪತ್ ಮಹಾಗಾಂವ್ ಗ್ರಾಮದ ಬೈಕ್ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಸಂತಪೂರ್ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ
ವರದಿ : ನಂದಕುಮಾರ ಕರಂಜೆ, ಬೀದರ