ಬೀದರ – ಔರಾದ್ ತಾಲೂಕಿನ ಎಕ್ಕಂಬಾ ಗ್ರಾಮದಲ್ಲಿ ಕೋವಿಡ್ ನಿಯಮ ಉಲಂಘಿಸಿ ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಪಟ್ಟಣ ಪಂಚಾಯತ್ ಸದಸ್ಯ ಹಾಗೂ ಸಾಮಾಜಿಕ ಕಾರ್ಯಕರ್ತ ಬಂಟಿ ದರಬಾರೆ ದೂರು ನೀಡಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರ ತವರೂರು ಔರಾದ ತಾಲೂಕು ಎಕ್ಕಂಬಾ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಕೋವಿಡ್ ನಿಯಮ ಉಲಂಘನೆ ಮಾಡಿದ್ದಾರೆ. ಸಾವಿರಾರು ಜನರು ಗುಂಪಾಗಿ ಸೇರಿಕೊಂಡು ಕಾರ್ಯಕ್ರಮ ಮಾಡಿದ ಸಚಿವ ಪ್ರಭು ಚವ್ಹಾಣ ಇನ್ನೊಂದು ಕಡೆ ಕಾರ್ಯಕ್ರಮ ಮುಗಿಸಿಕೊಂಡು ಬೀದರ್ ಜಿಲ್ಲಾ ಕಾರ್ಯಾಲಯದಲ್ಲಿ ಕೋವಿಡ್ ಹೇಗೆ ಹತೋಟಿಗೆ ತರಬೇಕು ಎಂದು ಅಧಿಕಾರಿ ಜೊತೆ ಸಭೆ ಮಾಡುತ್ತಾರೆ ಎಂದು ಅವರು ದೂರಿದ್ದಾರೆ.
ಬೀದರ್ ನಲ್ಲಿ ಕರೋನ ವೈರಸ್ ಸ್ಪೋಟ ಗೊಂಡಿದೆ. ಜಿಲ್ಲೆಯಲ್ಲಿ ೧೩೬ ಕರೋನ ಪ್ರಕರಣ ವರದಿಯಾಗಿದ್ದು ಭೀತಿ ಮೂಡಿಸಿದೆ ಆದರೆ ಸರ್ಕಾರದ ಭಾಗವಾಗಿರುವ ಸಚಿವ ಪ್ರಭು ಚವ್ಹಾಣ್, ಸೋಮವಾರ ಎಕ್ಕಂಬಾದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲಂಘಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ ಎಂಬ ಆರೋಪ ಬಂದಿದೆ. ಹೀಗಾಗಿ ಸಚಿವರ ವಿರುದ್ಧ ದೂರು ಸಲ್ಲಿಸಲಾಗಿದೆ.
ಸದ್ಯ ರಾಜ್ಯ ಹಾಗೂ ದೇಶದಲ್ಲಿ ಕೋವಿಡ್ ಉಲ್ಬಣಗೊಳ್ಳುತ್ತಿದ್ದು, ಸರ್ಕಾರ ಸಾಕಷ್ಟು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಸಭೆ – ಸಮಾರಂಭಗಳಿಗೆ ಸರ್ಕಾರ ಈಗಾಗಲೇ ಮಾರ್ಗಸೂಚಿಗಳನ್ನು ಬಿಡುಗಡೆಗೊಳಿಸಿದೆ. ಕನಿಷ್ಠ ಜನರ ನಡುವೆ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸಿ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸರ್ಕಾರ ನಿರ್ದೇಶಿಸಿದೆ. ಆದರೆ ಈ ನಡುವೆ ಸರ್ಕಾರದ ಭಾಗವಾಗಿರುವ ಸಚಿವ ಪ್ರಭು ಚವ್ಹಾಣ್, ಸೋಮವಾರ ಎಕ್ಕಂಬಾದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಕೋವಿಡ್ ನಿಯಮ ಉಲಂಘಿಸು, ಕಾರ್ಯಕ್ರಮದಲ್ಲಿ ಸಾವಿರಾರು ಜನರು ಭಾಗವಹಿಸಿದ್ದರು ಎಂದು ವಿಡಿಯೋ ದೃಶ್ಯಾವಳಿಯಿಂದ ಗೊತ್ತಾಗುತ್ತಿದೆ.
ಇದು ಸರ್ಕಾರದ ಕೋವಿಡ್ ನಿಯಮಾವಳಿಯ ಸ್ಪಷ್ಟ ಉಲಂಘನೆಯಾಗಿದೆ. ಹಾಗಾಗಿ, ಕೋವಿಡ್ ನಿಯಮ ಉಲಂಘಿಸಿದ ಮಾನ್ಯ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ರೀತಿ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ಒತ್ತಾಯಿಸಿದ್ದಾರೆ.
ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ,ಬೀದರ