spot_img
spot_img

ಮೆಟ್ರಿಕ್ ನಂತರ ಬಾಲಕರ ವಸತಿ ನಿಲಯದಲ್ಲಿ 16 ಕಂಪ್ಯೂಟರ್ ಗಳುಳ್ಳ ಸುಸಜ್ಜಿತ ಅಧ್ಯಯನ ಕೋಣೆ

Must Read

ಸಿಂದಗಿ: ದೇವಾಲಯದ ಮುಂದೆ ಸಾಲಾಗಿ ನಿಲ್ಲುವ ಬದಲು ಗ್ರಂಥಾಲಯದ ಮುಂದೆ ಸರದಿಯಲ್ಲಿ ಪುಸ್ತಕಗಳನ್ನು ಅಧ್ಯಯನ ಮಾಡಲು ಮುಂದಾದಾಗ ಮಾತ್ರ ಈ ದೇಶದಲ್ಲಿ ಬದಲಾವಣೆ ಕಾಣಲು ಸಾಧ್ಯ ಎಂದು ಹೇಳಿದ ಡಾ. ಅಂಬೇಡ್ಕರರ ಕನಸನ್ನು ನನಸಾಗಿಸಬೇಕು ಎಂದು ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ರಾಮನಗೌಡ ಕನ್ನೊಳ್ಳಿ ಹೇಳಿದರು.

ಪಟ್ಟಣದ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ 16 ಕಂಪ್ಯೂಟರ್ ಗಳುಳ್ಳ ಸುಸಜ್ಜಿತ ಅಧ್ಯಯನ ಕೋಣೆಯನ್ನು ಉದ್ಘಾಟಿಸಿ ಮಾತನಾಡಿ, ನಿಮ್ಮ ಜೀವನ ರೂಪಿಸಿಕೊಳ್ಳಲು ಆಧುನಿಕ ಸೌಕರ್ಯಗಳು ಸರಿಯಾದ ರೀತಿಯಲ್ಲಿ ಬಳಸಿಕೊಂಡು ಆಳುವ ವರ್ಗ ತಾವಾಗಿಯೇ ನಿಮ್ಮನ್ನು ಗೌರವಿಸುತ್ತದೆ ಎಂದರು.

ಈ ಸಂದರ್ಭದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ರಾಜಶೇಖರ ಕೂಚಬಾಳ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿ ಶ್ರಿಮತಿ ಎನ್ ಎಸ್ ಬೂಸಗೊಂಡ ಹಾಗೂ ವಸತಿ ನಿಲಯದ ಮೇಲ್ವಿಚಾರಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ವಿಶೇಷ ಅಗತ್ಯತೆಯುಳ್ಳ ಮಕ್ಕಳ ವೈದ್ಯಕೀಯ ಮೌಲ್ಯಾಂಕನ ಶಿಬಿರ

ಯರಗಟ್ಟಿಃ ಇಲ್ಲಿನ ಸರಕಾರಿ ಹಿರಿಯ ಪ್ರಾಥಮಿಕ ಮಾದರಿ ಶಾಲೆಯಲ್ಲಿ ೨೦೨೨-೨೩ ನೇ ಸಾಲಿನ ಯರಗಟ್ಟಿ ಹಾಗೂ ಮುರಗೋಡ ವಲಯಗಳ ವಿಕಲಚೇತನ ಮಕ್ಕಳ ಮೌಲಾಂಕನ ಶಿಬಿರ ಜರುಗಿತು. ಕಾರ‍್ಯಕ್ರಮದ...
- Advertisement -

More Articles Like This

- Advertisement -
close
error: Content is protected !!