- Advertisement -
ಬೀದರ – ಗಡಿ ಜಿಲ್ಲೆ ಬೀದರ್ ನಲ್ಲಿ ಸರಕಾರಿ ಶಾಲಾ ಆವರಣದಲ್ಲಿ ಮರ ಕಡಿಯುತ್ತಿದ್ದ ವೇಳೆ ಮರ ಬಿದ್ದು ಯುವಕನೊಬ್ಬ ಮೃತಪಟ್ಟ ಘಟನೆ ಬೀದರ್ ತಾಲೂಕಿನ ಹೊನ್ನಿಕೇರಿ ಸರ್ಕಾರಿ ಮಾದರಿ ಶಾಲೆಯಲ್ಲಿ ನಡೆದಿದೆ.
ಶಾಲೆಯ ಮುಖ್ಯೋಪಾಧ್ಯಾಯಿನಿ ನಿರ್ಮಲಾ ಅವರು ಮೇಲಾಧಿಕಾರಿಗಳ ಅನುಮತಿ ಇಲ್ಲದೆ ಮರ ಕಡಿಯಲು ಜನರನ್ನು ತೊಡಗಿಸಿದ್ದರೆನ್ನಲಾಗಿದ್ದು ಸಾರ್ವಜನಿಕರು ಮತ್ತು ಮೃತರ ಕುಟುಂಬಸ್ಥರು ಈ ಬಗ್ಗೆ ಆರೋಪ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಮರ ಕಡಿಯುವ ವೇಳೆಯಲ್ಲಿ ಇದ್ದಕ್ಕಿದ್ದ ಹಾಗೆ ಮರ ಬಿದ್ದು ಯುವಕ ಸಿದ್ದಪ್ಪ ವಿಶ್ವನಾಥ ಸಾವನ್ನಪ್ಪಿದ್ದಾನೆ.
- Advertisement -
ಶಾಲಾ ಮುಖ್ಯ ಗುರು ನಿರ್ಮಲಾ ಅವರು ಮರ ಮಾರಾಟ ಮಾಡಲು ಹೋಗಿ ಈ ದುರ್ಘಟನೆ ಸಂಭವಿಸಿದೆ ಎಂದು ಕಿಡಿಕಾರಿದ್ದಾರೆ.
ಸ್ಥಳಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಮರಣೋತ್ತರ ಪರೀಕ್ಷೆಗೆ ಶವ ಸಾಗಾಟ ಮಾಡಿದ್ದಾರೆ. ಈ ಬಗ್ಗೆ ಜನವಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ವರದಿ: ನಂದಕುಮಾರ ಕರಂಜೆ, ಬೀದರ