- Advertisement -
ಸಿಂದಗಿ: ಪಟ್ಟಣದ ಸಿ.ಎಂ.ಮನಗೂಳಿ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಬಿ.ಜಿ.ಪಾಟೀಲ ಇವರು ನೂತನ ಪ್ರಾಚಾರ್ಯರಾಗಿ ಅಧಿಕಾರ ವಹಿಸಿಕೊಂಡರು.
ಅವರಿಗೆ ಸಂಸ್ಥೆಯ ಅಧ್ಯಕ್ಷ ಅಶೋಕ ಎಮ್.ಮನಗೂಳಿಯವರು ಆಡಳಿತ ಮಂಡಳಿಯ ಸದಸ್ಯರು, ಮಹಾವಿದ್ಯಾಲಯದ ಎಲ್ಲ ಸಿಬ್ಬಂದಿ ವರ್ಗದವರು ಹಾಗೂ ಎಚ್.ಜಿ. ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರು, ಸಿಬ್ಬಂದಿ ವರ್ಗದವರು ಮತ್ತು ಸಂಸ್ಥೆಯ ಎಲ್ಲ ಅಂಗ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಿಬ್ಬಂದಿ ವರ್ಗದವರು ಶುಭ ಕೋರಿದರು..