spot_img
spot_img

ಟ್ರಾವೆಲರ್ ಮತ್ತು ಟ್ರಕ್ ಮಧ್ಯೆ ಅಪಘಾತ; ಕರ್ನಾಟಕದ ಏಳು ಜನರ ಸಾವು

Must Read

- Advertisement -

ಬೀದರ – ಉತ್ತರ ಪ್ರದೇಶದ ಲಖಿಂಪುರ ಖೇರಿ ಮತ್ತು ಮೋತಿಪುರ ನಡುವಿನ ಪ್ರದೇಶವಾದ ನೌನಿಹಾಲ್‌ನ ಖೇರಿ-ನನ್‌ಪಾರಾ ಹೆದ್ದಾರಿಯಲ್ಲಿ ಟೆಂಪೋ ಟ್ರಾವೆಲರ್ (ಕೆಎ 03-ಎಎ-7654) ಮತ್ತು ಟ್ರಕ್ (ಯುಪಿ 21-ಸಿಟಿ-4120) ನಡುವೆ ಬೆಳಗಿನ ಜಾವ ಭೀಕರ ಅಪಘಾತ ಸಂಭವಿಸಿದ್ದು ಏಳು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಅಪಘಾತದಲ್ಲಿ ಕರ್ನಾಟಕ ಬೀದರ್ ಜಿಲ್ಲೆಗೆ ಸೇರಿದ ಒಟ್ಟು 16 ಜನರು ಸೇರಿದ್ದು ಅವರು ಅಯೋಧ್ಯೆಯ ರಾಮನ ದರ್ಶನಕ್ಕೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

- Advertisement -

ಈ ದುರ್ಘಟನೆಯಲ್ಲಿ ಒಟ್ಟು 7 ಮಂದಿ ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದಾರೆ.ಗಾಯಗೊಂಡ 9 ಜನರಲ್ಲಿ 3 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂಬ ವರದಿ ಇದೆ.

ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಹ್ರೈಚ್‌ನ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಸ್ಥಳಕ್ಕೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಎಸ್‌ಪಿ ಆಸ್ಪತ್ರೆಗೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮೋತಿಪೂರ್ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ವರದಿ: ನಂದಕುಮಾರ ಕರಂಜೆ,ಬೀದರ

- Advertisement -
- Advertisement -

Latest News

ಸಾವಿಲ್ಲದ ಶರಣರು -ಮಹಾ ದಾಸೋಹಿ ಎಲೆ ಮಲ್ಲಪ್ಪ ಶೆಟ್ಟರು

ಎಲೆ ಮಲ್ಲಪ್ಪ ಶೆಟ್ಟರ ಅವರ ಹಿರಿಯರು ಚಿಕ್ಕಮಗಳೂರಿನ ಹತ್ತಿರ ನಂದಿಹಳ್ಳಿ ಗ್ರಾಮದವರು. ರಾಜ ಮಹಾರಾಜರಿಗೆ ಸಮಾರಂಭ ಗಳಲ್ಲಿ ವೀಳ್ಯವನ್ನು ಸರಬರಾಜು ಮಾಡುವ ಕಾಯಕದವರು. ಶರಣ ಸಂಸ್ಕೃತಿಯ...
- Advertisement -

More Articles Like This

- Advertisement -
close
error: Content is protected !!
Join WhatsApp Group