ಕ್ಯಾಂಟರ್-ಕ್ರೂಜರ್ ಡಿಕ್ಕಿ – ಮದುಮಗಳ ಸಾವು

Must Read

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...

ಲೋಳಸೂರ ಹೊಸ ಸೇತುವೆ ನಿರ್ಮಿಸುವಂತೆ ನೂತನ ಸಿಎಂ ಅವರಿಗೆ ಕಡಾಡಿಯವರಿಂದ ಮನವಿ

ಮೂಡಲಗಿ: ಗೋಕಾಕ ನಗರಕ್ಕೆ ಸಂಪರ್ಕ ಕಲ್ಪಿಸುವ ಜತ್ತ ಜಾಂಬೋಟಿ ರಾಜ್ಯ ಹೆದ್ದಾರಿ-31 ರ ಲೋಳಸೂರ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಅಡ್ಡಲಾಗಿ ಹೊಸ ಸೇತುವೆ ನಿರ್ಮಿಸುವಂತೆ...

ಭಾರತ ಮಾತೆಯ ಜ್ಞಾನ ಶಕ್ತಿ ಭಾರತೀಯ ಸ್ತ್ರೀಯಲ್ಲಿದೆ

ಪತಿವ್ರತೆಗೂ ಧರ್ಮ ಪತ್ನಿಗಿರುವ ವ್ಯತ್ಯಾಸವಿಷ್ಟೆ. ಪತಿವ್ರತೆ ಪತಿಯ ದಾರಿಯಲ್ಲಿ ತಾನೂ ನಡೆಯೋದು. ಧರ್ಮಪತ್ನಿ ಪತಿಯನ್ನು ಧರ್ಮದ ಹಾದಿಯಲ್ಲಿ ನಡೆಸೋದು. ಭೂಮಿ ಮೇಲೆ ಧರ್ಮ ನೆಲೆಸಬೇಕಾದರೆ ಸ್ತ್ರೀ...

ಸಿಂದಗಿ: ತಾಲೂಕಿನ ಯರಗಲ್ ಯುಕೆಪಿ ಕ್ಯಾಂಪ ಹತ್ತಿರ ರಾಷ್ಟ್ರೀಯ ಹೆದ್ದಾರಿ ೫೦ರಲ್ಲಿ ಕ್ಯಾಂಟರ ಲಾರಿ ಹಾಗೂ ಕ್ರೂಜರ್ ಜೀಪ್ ಗೆ ನೇರವಾಗಿ ಗುದ್ದಿದ್ದ ಪರಿಣಾಮ ಮದುಮಗಳು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು ಪ್ರಕರಣ ದಾಖಲಾಗಿದೆ.

ಕ್ಯಾಂಟರ ವಾಹನದ ಚಾಲಕ ಅಪಘಾತ ಮಾಡಿ ವಾಹನ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ ಕ್ಲಿನರ್ ವಾಹನ ಚಲಾಯಿಸುತ್ತಿದ್ದ ಎನ್ನಲಾಗಿದ್ದು ಕ್ಯಾಂಟರ ಚಾಲಕನ ನಿರ್ಲಕ್ಷತನದಿಂದ ವಾಹನ ಚಲಾಯಿಸುತ್ತಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು ದಿ‌. ೧ ರಂದು ಶಾಬಾದಿ ತಾಲೂಕಿನ ಭೀಮಸಪ್ಪ ನಗರದಲ್ಲಿ ರಾಣಿ ಜೊತೆ ಗಣೇಶ ಚವ್ಹಾಣ(ಬೋರಗಿ) ಮದುವೆ ಮುಗಿಸಿ ಮನೆ ದೇವರು ಅಥಣಿ ತಾಲೂಕಿನ ಕೊಕಟನೂರ ಎಲ್ಲಮ್ಮದೇವಿ ಆಶಿರ್ವಾದ ಪಡೆಯಲೆಂದು ಶಾಬಾದದಿಂದ ವಿಜಯಪುರ ಮಾರ್ಗವಾಗಿ ತೆರಳಿದ್ದರು.

ಮದುಮಗಳು ರಾಣಿ ಚವ್ಹಾಣ (೨೫ ) ಅಪಘಾತದಲ್ಲಿ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ ಮತ್ತು ಸುನೀತಾ ಚವ್ಹಾ,ಣ, ಗಣೇಶ ಚವ್ಹಾಣ, ನಾಮದೇವ ಚವ್ಹಾಣ, ರೇಣು ಲಸ್ಕರೆ, ಆರುಷ ಲಸ್ಕರೆ, ಜಯಶ್ರಿ ಚವ್ಹಾಣ, ಅಜಯ ಕುಶಾಳೆ ಕ್ಲೋಸರ್ ಚಾಲಕ ಆನಂದ ಸೇರಿ ೬ ಜನರಿಗೆ ಗಂಭೀರವಾಗಿ ಗಾಯಗೊಂಡು ಕಲಬುರ್ಗಿ ಶಾ ಆಸ್ಪತ್ರೆಗೆ ದಾಖಲಾಗಿದ್ದಾರೆ.

- Advertisement -

ಸಿಪಿಐ ಎಚ್.ಎಂ.ಪಟೇಲ ಅವರು ಸಿಂದಗಿ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.

- Advertisement -
- Advertisement -

Latest News

ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿ ಉದ್ಘಾಟನೆ

ಮೂಡಲಗಿ - ಹಲವಾರು ಯುವ ಪತ್ರಕರ್ತರ ಉತ್ಸಾಹ ಹಾಗೂ ಕಾರ್ಯಶೀಲತೆಯ ಪ್ರತೀಕವಾಗಿ ರಚನೆಗೊಂಡ ಮೂಡಲಗಿ ತಾಲೂಕಾ ಪತ್ರಕರ್ತರ ಸಂಘದ ಕಚೇರಿಯನ್ನು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿಯವರ...
- Advertisement -

More Articles Like This

- Advertisement -
close
error: Content is protected !!