ಸಿಂದಗಿ: ತಾಲೂಕಿನ ಕನ್ನೋಳ್ಳಿ ಗ್ರಾಮದ ಶ್ರೀ ಡಿ.ಎಸ್.ಪಾಟೀಲ್ ಪದವಿ ಪೂರ್ವ ಮಹಾವಿದ್ಯಾಲಯದ 2021-22ನೆಯ ಸಾಲಿನ ದ್ವಿತೀಯ ಪಿ.ಯು.ಸಿ. ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.
ಕಲಾ ವಿಭಾಗದಲ್ಲಿ ಶರಣಮ್ಮ ಪಾರ್ಥನಳ್ಳಿ 600 ಅಂಕಗಳಿಗೆ 537 (ಶೇ 89.5) ಅಂಕ ಪಡೆದು ಕಾಲೇಜಿಗೆ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾನೆ. ಪೂಜಾ ಸಾರಂಗಮಠ 600ಅಂಕಗಳಿಗೆ 535 (89.16) ಪಡೆದು ದ್ವಿತೀಯ ಸ್ಥಾನ, ಸ್ನೇಹಾ ಮಂಗೊಂಡಿ 532 (ಶೇ 88.66) ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದಾರೆ.
2021-2022 ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆಯ ಕನ್ನೋಳ್ಳಿ ಗ್ರಾಮದ ಶ್ರೀ ಡಿ.ಎಸ್.ಪಾಟೀಲ್ ಪದವಿ ಪೂರ್ವ ಮಹಾವಿದ್ಯಾಲಯದ ಕಲಾ ವಿಭಾಗದಿಂದ ಪರೀಕ್ಷೆಗೆ ಹಾಜರಾದ ಒಟ್ಟು 29 ವಿದ್ಯಾರ್ಥಿನಿಯರಲ್ಲಿ 10 ವಿದ್ಯಾರ್ಥಿನಿಯರು ಅತ್ಯುನ್ನತ ಶ್ರೇಣಿ, 17 ವಿದ್ಯಾರ್ಥಿನಿಯರು ಪ್ರಥಮ ಶ್ರೇಣಿ, 2 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೆರ್ಗಡೆಯಾಗಿದ್ದಾರೆ.
ಶಿಕ್ಷಣಶಾಸ್ತ್ರ ವಿಷಯದಲ್ಲಿ 2 ಜನ ವಿದ್ಯಾರ್ಥಿನಿಯರು 100 ಕ್ಕೆ 100 ಅಂಕಗಳನ್ನು ಪಡೆದಿರುತ್ತಾರೆ. ಕಾಲೇಜಿನ ಒಟ್ಟು ಫಲಿತಾಂಶ 100 ಕ್ಕೆ 100ರಷ್ಟಾಗಿದೆ. ವಿದ್ಯಾರ್ಥಿನಿಯರ ಈ ಸಾಧನೆಗೆ ಸಂಸ್ಥೆಯ ಚೇರಮನ್ನರಾಧ ಸಿದ್ದನಗೌಡ ಪಾಟೀಲ್ ಆಡಳಿತ ಮಂಡಳಿಯ ಸದಸ್ಯರು, ಪ್ರಾಚಾರ್ಯರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯವರು ಹರ್ಷ ವ್ಯಕ್ತಪಡಿಸಿದ್ದಾರೆ.