ಹಿಂದೂ ವಿರೋಧಿ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Must Read

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...

ಅಧ್ಯಾತ್ಮ ವಿದ್ಯೆ ಮಕ್ಕಳ ಮೂಲ ಶಿಕ್ಷಣವಾಗಬೇಕು

ಭೂಮಿಯ ಮೇಲಿರುವ ಮಾಯೆ ಎಲ್ಲರಿಗೂ ಮಂಕು ಮಾಡುತ್ತದೆ ಎನ್ನುವುದಕ್ಕೆ ನಮ್ಮ ಅನುಭವವೇ ಸಾಕ್ಷಿ. ಇಲ್ಲಿ ಯಾರೋ ಹಿಂದೆ ಅನುಭವಿಸಿ, ಹೇಳಿ, ಬರೆದಿಟ್ಟ ಸತ್ಯವನ್ನು ನಾವು ಬಹಳ...

ಅರುಣ ಕಿರಣ ಪ್ರತಿದಿನ

. . .🕉. . . . || ಶ್ರೀ ಗುರುಭ್ಯೋ ನಮಃ || || ಓ೦ ಗ೦ ಗಣಪತಯೇ ನಮಃ || 🙏ಶುಭೋದಯ🙏 16: 06: 2021 ಬುಧವಾರ ಕಲಿಯುಗಾಬ್ದ...

ಸಿಂದಗಿ: ಹಿಂದೂ ದೇವಸ್ಥಾನಗಳ ತಸ್ತಿಕ್ ಭತ್ಯೆಯ ಅನುದಾನವನ್ನು ಅನ್ಯ ಮತಿಯರ ಧಾರ್ಮಿಕ ಸ್ಥಳಗಳಿಗೆ ಬಿಡುಗಡೆ ಮಾಡಿರುವದನ್ನು ತಡೆ ಹಿಡಿದ ರಾಜ್ಯ ಸರಕಾರಕ್ಕೆ ಆಭಾರಮನ್ನಣೆ ಮತ್ತು ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಜರುಗಿಸಬೇಕೆಂದು ಹಿಂದೂ ಜನ ಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡಾ ಆಗ್ರಹಿಸಿದ್ದಾರೆ

ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖೆಯ ಅನುದಾನದಿಂದ ೨೦೨೧-೨೨ ಸಾಲಿನ ತಸ್ತಿಕ ಭತ್ಯೆಯ ರೂಪದಲ್ಲಿ ೩೦ ಕ್ಕೂ ಅಧಿಕ ಅನ್ಯಮತೀಯರ ಪ್ರಾರ್ಥನಾ ಸ್ಥಳಗಳಿಗೆ ೧೩.೫೦ ಲಕ್ಷ ರೂ.ಗಳನ್ನು ನೀಡಲಾಗಿತ್ತು. ತದನಂತರ ಹಿಂದೂಗಳ ವಿರೋಧದಿಂದ ಈ ಆದೇಶವನ್ನು ಮುಜರಾಯಿ ಸಚಿವರಾದ ಕೋಟಾ ಶ್ರೀನಿವಾಸ ಪೂಜಾರಿಯವರು ತಡೆ ಹಿಡಿಯಲು ಆದೇಶ ನೀಡಿದ್ದಾರೆ.

ತಮ್ಮ ಗಮನಕ್ಕೆ ಬಂದ ತಕ್ಷಣ ತತ್ಪರತೆಯಿಂದ ಆದೇಶವನ್ನು ತಡೆ ಹಿಡಿಯುವಂತೆ ಆದೇಶ ನೀಡಿದ್ದಕ್ಕಾಗಿ ಮಾನ್ಯ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ಹಿಂದೂ ಜನಜಾಗೃತಿ ಸಮಿತಿಯು ಅಭಿನಂದನೆಗಳನ್ನು ಸಲ್ಲಿಸುತ್ತದೆ.

- Advertisement -

ಆದರೆ ಧಾರ್ಮಿಕ ದತ್ತಿ ಇಲಾಖೆಯಲ್ಲಿ ಇಂತಹ ತಪ್ಪುಗಳ ಪುನರಾವರ್ತನೆಯಾಗುತ್ತಿರುತ್ತದೆ. ಫೆಬ್ರವರಿ 2021 ರಲ್ಲಿ ಬೆಳಗಾವಿಯ 16 ಹಿಂದೂ ದೇವಸ್ಥಾನಗಳನ್ನು ವಶಪಡಿಸಿ ಸರಕಾರೀಕರಣಗೊಳಿಸಲು ಆದೇಶವನ್ನು ಹೊರಡಿಸಲಾಗಿತ್ತು.

ತದನಂತರ ಭಕ್ತರ ವಿರೋಧದಿಂದ ಆದೇಶವು ರದ್ದಾಯಿತು. ಹಾಗಾಗಿ ಇಂತಹ ತಪ್ಪುಗಳನ್ನು ಮಾಡುವ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ ಗೌಡ ಆಗ್ರಹಿಸಿದ್ದಾರೆ.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಆಹಾರ ಧಾನ್ಯದ ಕಿಟ್ ವಿತರಣೆ

ಸವದತ್ತಿ - ಕೋರೋನಾ ರೋಗ ಹರಡದಂತೆ ನೋಡಿಕೊಳ್ಳಲು ಸರಕಾರ ಲಾಕ್ ಡೌನ ಮಾಡಿದ್ದರಿಂದ ನಮ್ಮ ಬ್ರಾಹ್ಮಣ ಸಮಾಜದ ಕುಟುಂಬದವರಿಗೆ ಜೀವನ ಸಾಗಿಸಲು ತುಂಬಾ ಕಷ್ಟವಾಗಿದ್ದು ಆದ್ದರಿಂದ...
- Advertisement -

More Articles Like This

- Advertisement -
close
error: Content is protected !!