spot_img
spot_img

ಜನರ ಸಮಸ್ಯೆಗಳ ತಕ್ಷಣ ಪರಿಹಾರಕ್ಕೆ ಕ್ರಮ – ಗ್ರಾಮ ವಾಸ್ತವ್ಯದಲ್ಲಿ ಜಿಲ್ಲಾಧಿಕಾರಿ ನಿತೇಶ ಪಾಟೀಲ್

Must Read

ಮೂಡಲಗಿ – ಹೊಸ ತಾಲ್ಲೂಕಿನ ಸಮಸ್ಯೆಗಳನ್ನು ಅರಿತುಕೊಳ್ಳುವ ನಿಟ್ಟಿನಲ್ಲಿ ತಮ್ಮ ಪ್ರಥಮ ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕಾಗಿ ಮೂಡಲಗಿ ತಾಲೂಕಿನ ಭೈರನಟ್ಟಿ ಗ್ರಾಮವನ್ನು ಆಯ್ಕೆ ಮಾಡಿಕೊಂಡಿದ್ದೇನೆ. ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಮೂಲಕ ಸ್ಥಳೀಯ ಸಮಸ್ಯೆಯನ್ನು ಪರಿಹರಿಸಬೇಕು ಈ ನಿಟ್ಟಿನಲ್ಲಿ ಎಲ್ಲ ಇಲಾಖೆಗಳ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು ಎಂದು ಬೆಳಗಾವಿ ನೂತನ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಹೇಳಿದರು.

ಆಡಳಿತವನ್ನು ಜನರ ಮನೆ ಬಾಗಿಲಿಗೆ ಕೊಂಡೊಯ್ಯುವ ಆಶಯದಂತೆ ಮೂರನೆಯ ಶನಿವಾರ ಸಮೀಪದ ಭೈರನಟ್ಟಿ ಗ್ರಾಮದಲ್ಲಿ ಶನಿವಾರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸುವ ಮೂಲಕ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಬಗೆಹರಿಸುವ ಪ್ರಯತ್ನ ಮಾಡಿದರು.

ಮೊದಲ ಬಾರಿಗೆ ಜಿಲ್ಲಾಧಿಕಾರಿಗಳು ತಮ್ಮ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ ಎಂದು ಗ್ರಾಮಸ್ಥರು ಸಡಗರದಿಂದ ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಅವರನ್ನು ಗ್ರಾಮದ ದ್ವಾರದಿಂದ ಬರಮಾಡಿಕೊಂಡರು. ಸರಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸಸಿ ನೆಟ್ಟು ಮಕ್ಕಳೊಂದಿಗೆ ಚರ್ಚಿಸಿದರು.  ಕಾಲ್ನಡಿಗೆಯಲ್ಲಿಯೇ ಜಿಲ್ಲಾಧಿಕಾರಿಗಳು ಪ್ರಸಿದ್ದ ಜಡಿಸಿದ್ದೇಶ್ವರ ಮಠಕ್ಕೆ ತೆರಳಿ ದರ್ಶನ ಪಡೆದರು.

ಆವರಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಪೋಷಣ ಅಭಿಯಾನ ಮತ್ತು ಪೌಷ್ಠಿಕ ಆಹಾರ ಶಿಬಿರಕ್ಕೆ ಚಾಲನೆ ನೀಡಿ ಕೆಲವು ಮಕ್ಕಳಿಗೆ ಸಿಹಿ ತಿನ್ನಿಸಿದರು. ಆರೋಗ್ಯ ಇಲಾಖೆಯಿಂದ ಆಯೋಜಿಸಿಲಾಗಿದ್ದ ಆರೋಗ್ಯ ಮೇಳವನ್ನು ವೀಕ್ಷಿಸಿದರು. ಸುಮಾರು 120 ಜನರ ನೇತ್ರ ತಪಾಸಣೆ ನಡೆಸಲಾಗಿದ್ದು ಅದರಲ್ಲಿ 10 ಜನರಿಗೆ ಸ್ಥಳದಲ್ಲಿಯೇ ಕನ್ನಡಕವನ್ನು ಜಿಲ್ಲಾಧಿಕಾರಿಗಳು ವಿತರಿಸಿದರು, ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದರು.

ರಸ್ತೆ ಗಟಾರಗಳನ್ನು ನಿರ್ಮಿಸುವಂತೆ ಅನೇಕ ಜನರು ಈ ಸಂದರ್ಭದಲ್ಲಿ ಒತ್ತಾಯಿಸಿದರು ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಈ ಬಗ್ಗೆ ತಕ್ಷಣವೇ ಅಗತ್ಯ ಕ್ರಮಕೈಗೊಳ್ಳುವಂತೆ ಗ್ರಾಮೀಣಾಭಿವೃದ್ದಿ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು, ಸರಕಾರಿ ಜಾಗೆಯಲ್ಲಿ ನಿರ್ಮಿಸಲಾಗಿದ್ದ ಮನೆಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಕೆಲವರು ಮನವಿ ಮಾಡಿದರು.

ಅಕ್ರಮ ಸಕ್ರಮ ಅರ್ಜಿ ಸಲ್ಲಿಸಲು ಸೂಚನೆ ಅಕ್ರಮ ಸಕ್ರಮ ಯೋಜನೆಯಡಿ ನಿಯಮಾವಳಿ ಪ್ರಕಾರ ಅರ್ಜಿ ಸಲ್ಲಿಸಿದರೆ ಈ ಬಗ್ಗೆ ಸೂಕ್ತ ನಿರ್ಣಯ ತಗೆದುಕೊಂಡು ಅನುಕೂಲ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು. ಹನಿ ನೀರಾವರಿ ಸೌಲಭ್ಯ ಒದಗಿಸುವಂತೆ ಗ್ರಾಮದ ಕೆಲವರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಸ್ಥಳದಲ್ಲಿಯೇ ಅರ್ಜಿ ನಮೂನೆ ವಿವರಿಸಿದರಲ್ಲದೆ ಅವುಗಳನ್ನು ಭರ್ತಿ ಮಾಡಿಸಿ ಮುಂದಿನ ಕ್ರಮಕ್ಕಾಗಿ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳಿಗೆ ಆದಷ್ಟು ಬೇಗನೆ ಸೌಲಭ್ಯ ಒದಗಿಸಿಕೊಡುವಂತೆ ಸೂಚನೆ ನೀಡಿದರು. ಕೆಲವು ಮಹಿಳೆಯರಿಗೆ ವಿಧವಾ ವೇತನ ಪ್ರಮಾಣ ಪತ್ರಗಳನ್ನು ನೀಡಿದರು.

ಗ್ರಾಮಸ್ಥರ ಲಿಖಿತ ಮನವಿಗಳನ್ನು ಸ್ವಿಕರಿಸಿದ ಅವರು ರಸ್ತೆ ಗಟಾರ ನಿರ್ಮಾಣ, ವಸತಿ ಸೌಕರ್ಯ ಒದಗಿಸುವದು ಸೇರಿದಂತೆ ಯಾವದೇ ರೀತಿಯ ಸಮಸ್ಯೆಗಳಿದ್ದರೂ ಅವುಗಳನ್ನು ತಕ್ಷಣವೇ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದರು. ಈ ಸಮಯದಲ್ಲಿ ಬೈಲಹೊಂಗಲದ ಉಪ ವಿಭಾಗಾಧಿಕಾರಿ ಶಶಿಧರ ಬಗಲಿ, ಮೂಡಲಗಿ ತಹಶೀಲ್ದಾರ ದಿಲಶಾದ ಮಹಾತ್, ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಯಲಪ್ಪ ಗದಾಡಿ, ತಾಲೂಕಾ ಪಂಚಾಯತ ಅಧಿಕಾರಿ ಎಫ್ ಜಿ ಚಿನ್ನನ್ನವರ, ಹೆಸ್ಕಾಂ ಎಇಇ ನಾಗನ್ನವರ, ತಾಲೂಕಾ ಆರೋಗ್ಯಾಧಿಕಾರಿ ಡಾ ಮುತ್ತಪ್ಪ ಕೊಪ್ಪದ, ಪೋಲಿಸ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮತ್ತು ತಾಲೂಕಾ ಮಟ್ಟದ ಅಧಿಕಾರಿಗಳು, ಗ್ರಾಮದ ಹಿರಿಯರು,ಅಂಗನವಾಡಿ ಆಶಾ ಕಾರ್ಯಕರ್ತೆಯರು ಆರೋಗ್ಯ ಇಲಾಖೆಯ ಸಿಬ್ಬಂದಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಭೈರನಟ್ಟಿ ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿದ ನಂತರ ಜಿಲ್ಲಾಧಿಕಾರಿಗಳು ಮೂಡಲಗಿ ತಾಲೂಕಾ ಕೇಂದ್ರಕ್ಕೆ ಭೆಟ್ಟಿ ನೀಡಿ ಅಲ್ಲಿ ತಹಶೀಲ್ದಾರ ಕಛೇರಿಯಲ್ಲಿ ಭೂಮಿ ಕೇಂದ್ರದ ಉದ್ಗಾಟನಾ ಸಮಾರಂಭದಲ್ಲಿ ಪಾಲ್ಗೊಂಡರು.

- Advertisement -
- Advertisement -

Latest News

ವಿರಾಟಪುರ ವಿರಾಗಿ ಚಿತ್ರದ ವಾಲ್ ಪೋಸ್ಟರ್ ಬಿಡುಗಡೆ

ಸಿಂದಗಿ: ಹಾನಗಲ್ಲ ಗುರುಕುಮಾರ ಮಹಾಸ್ವಾಮಿಗಳವರ ಉಸಿರೇ ಸಮಾಜವಾಗಿತ್ತು ತಮ್ಮ ಬಗ್ಗೆ ಕಿಂಚಿತ್ತೂ ವಿಚಾರ ಮಾಡಿದವರಲ್ಲ ಎಂದು ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಹೇಳಿದರು. ಪಟ್ಟಣದ ಸಾರಂಗಮಠದಲ್ಲಿ ಹಾನಗಲ್ಲ ಶ್ರೀ...
- Advertisement -

More Articles Like This

- Advertisement -
close
error: Content is protected !!