ಬೆನಕಟ್ಟಿಯಲ್ಲಿ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ

Must Read

ಬಾಗಲಕೋಟೆ :ತಾಲೂಕಿನ ಬೆನಕಟ್ಟಿಗ್ರಾಮದಲ್ಲಿ  ದಿ. 20 ರಂದು ಹೇಮ – ವೇಮನ ಸದ್ಬೋಧನ ಪೀಠದ ವಾರ್ಷಿಕೋತ್ಸವ, ವಿದ್ಯಾರ್ಥಿಗಳ ದತ್ತು ಸ್ವೀಕಾರ, ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮ ಜರುಗಲಿದೆ.

ಗ್ರಾಮದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನದ ಆವರಣದಲ್ಲಿ ಭಾನುವಾರ ಮುಂಜಾನೆ 10.30 ಗಂಟೆಗೆ ಎರೆಹೊಸಳ್ಳಿಯ ರಡ್ಡಿ ಗುರುಪೀಠದ ಪೂಜ್ಯ ವೇಮನಾನಂದ ಶ್ರೀಗಳ ದಿವ್ಯ ಸಾನ್ನಿಧ್ಯದಲ್ಲಿ ನಡೆಯುವ ಸಮಾರಂಭದ ನೇತೃತ್ವವನ್ನು ಆಧ್ಯಾತ್ಮಿಕ ಚಿಂತಕ ಪ್ರದೀಪ ಗುರೂಜಿ ವಹಿಸುವರು.

ಹಿರಿಯ ವಕೀಲ ಎಸ್.ಕೆ.ಯಡಹಳ್ಳಿ ಅಧ್ಯಕ್ಷತೆ ವಹಿಸಲಿದ್ದು, ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ 1 ನೇ ಬೆಟಾಲಿಯನ್ ಕಮಾಂಡೆಂಟ್ ಅಮರನಾಥ ರೆಡ್ಡಿ ಕಾರ್ಯಕ್ರಮ ಉದ್ಘಾಟಿಸುವರು.

ವಾಣಿಜ್ಯ ತೆರಿಗೆ ಇಲಾಖೆಯ ನಿವೃತ್ತ ಉಪ ಆಯುಕ್ತ ಜಿ.ಬಿ.ಗೌಡಪ್ಪಗೋಳ ಮುಖ್ಯ ಅತಿಥಿಯಾಗಿ, ಧಾರವಾಡ ಕರ್ನಾಟಕ ವಿಶ್ವ ವಿದ್ಯಾಲಯದ ಮಹಾಯೋಗಿ ವೇಮನ ಪೀಠದ ಸಂಚಾಲಕ ಹೇಮರಡ್ಡಿ ನೀಲಗುಂದ ಹಾಗೂ ಸ್ಥಳೀಯ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ಸಮಿತಿ ಅಧ್ಯಕ್ಷ ಪಂಡಿತ ಮಾಚಾ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದು ಸದ್ಬೋಧನ ಪೀಠದ ಪ್ರಕಟಣೆ ತಿಳಿಸಿದೆ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group