ಬೀದರ – ನಗರದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ ಇದೆ ಹಾಗೂ ಮಹಾನಗರ ಪಾಲಿಕೆಯು ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಹಾನಗರ ಪಾಲಿಕೆ ಎದುರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಹಾನಗರ ಪಾಲಿಕೆ ಅಧ್ಯಕ್ಷರು ಹಾಗೂ ಪೌರಾಡಳಿತ ಸಚಿವ ರಹೀಂ ಖಾನ್ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯಕರ್ತರು ಬೃಹತ್ ರ್ಯಾಲಿಯ ಮೂಲಕ ಪ್ರತಿಭಟನೆ ಹಮ್ಮಿಕೊಂಡಿದ್ದರು.
ಮಹಾನಗರ ಪಾಲಿಕೆಯು ಜನವಿರೋಧಿಯಾಗಿದೆ, ರುದ್ರ ಭೂಮಿಯ ಹಣವನ್ನು ಲಪಟಾಯಿಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸಭಾಪತಿ ರಘುನಾಥ ರಾವ್ ಮಲಕಾಪುರೆ, ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ ಹಾಗೂ ಬಿಜೆಪಿ ಮುಖಂಡರಾದ ಬಾಬು ವಾಲಿ, ಶಶಿ ಹೊಸಳ್ಳಿ ಸೇರಿದಂತೆ ಹಲವು ಮುಖಂಡರು ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ವರದಿ : ನಂದಕುಮಾರ ಕರಂಜೆ, ಬೀದರ

