- Advertisement -
ಹಳ್ಳೂರ- ವಿಜಯಪೂರ ನಗರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಉಚ್ಚಾಟನೆ ಮಾಡಿದ ಕ್ರಮವನ್ನು ಖಂಡಿಸಿ ಉಚ್ಚಾಟನೆಗೆ ಕಾರಣಿಭೂತರಾದ ಮಾಜಿ ಮುಖ್ಯ ಮಂತ್ರಿ ಬಿ ಎಸ್ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾದ್ಯಕ್ಷ ಬಿ ವಾಯ್ ವಿಜೇಯೇಂದ್ರ ಅವರ ಪ್ರತಿಕೃತಿ ದಹನ ಮಾಡಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ದಿಕ್ಕಾರ ಕೂಗಿದರು.
ಹಳ್ಳೂರ ಗುಬ್ಬಿ ಬಸ್ ನಿಲ್ದಾಣ ಮುಧೋಳ ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ ನಡೆದ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿದ ಗ್ರಾಮ ಆಡಳಿತ ಅಧಿಕಾರಿ ಸಂಜು ಅಗ್ನೇಪ್ಪಗೋಳ ಆವರಿಗೆ ಉಚ್ಚಾಟನೆಯ ಆದೇಶ ಹಿಂಪಡೆಯಬೇಕೆಂದು ಸರಕಾರಕ್ಕೆ ಮನವಿ ಸಲ್ಲಿಸಿದರು.
ಬಸನಗೌಡ ಪಾಟೀಲ ಯತ್ನಾಳ ಅಭಿಮಾನಿ ಬಳಗ ಹಳ್ಳೂರ ನೂರಾರು ಅಭಿಮಾನಿಗಳು ಮುಧೋಳ ನಿಪ್ಪಾಣಿ ರಾಜ್ಯ ಹೆದ್ದಾರಿಯಲ್ಲಿ ಪ್ರತಿಭಟನೆ ಮಾಡಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಈ ಸಮಯದಲ್ಲಿ ಬಸನಗೌಡ ಪಾಟೀಲ ಯತ್ನಾಳ ಅಭಿಮಾನಿ ಬಳಗದವರಿದ್ದರು.
- Advertisement -
ವರದಿ: ಮುರಿಗೆಪ್ಪ ಮಾಲಗಾರ