ಮಂಡ್ಯದಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನ

Must Read

ಕನ್ನಡ ಸಾಹಿತ್ಯ ಪರಿಷತ್ತಿನ ಆಶ್ರಯದಲ್ಲಿ ನಡೆಯುವ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಮಂಡ್ಯದಲ್ಲಿ ಆಯೋಜನೆಯಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನಾಡೋಜ ಡಾ ಮಹೇಶ್ ಜೋಶಿ ತಿಳಿಸಿದ್ದಾರೆ.

ಅವರ ನಾಯಕತ್ವದಲ್ಲಿ ಮುಖ್ಯಮಂತ್ರಿಗಳಾದ ಶ್ರ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಇದೇ ವರ್ಷ ಡಿಸೆಂಬರ್ ತಿಂಗಳ ತಾರೀಕು ಶುಕ್ರವಾರ ೨೦ ಶನಿವಾರ ೨೧ ಹಾಗೂ ಭಾನುವಾರ ೨೨ ಈ ದಿನಗಳಲ್ಲಿ ಸಮ್ಮೇಳನವನ್ನು ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು

ಮಂಡ್ಯ ಜಿಲ್ಲೆಯ ಉಸ್ತುವಾರಿ ಸಚಿವರಾದ ಚಲುವರಾಯಸ್ವಾಮಿಯವರು ಸೇರಿದಂತೆ ಶಾಸಕರು, ವಿಧಾನ ಪರಿಷತ್ತಿನ ಸದಸ್ಯರುಗಳು, ಮಂಡ್ಯ ಜಿಲ್ಲೆಯ ಹಿರಿಯ ಅಧಿಕಾರಿಗಳ ವರ್ಗ ಸೇರಿದಂತೆ ಸರ್ಕಾರದ ಇಲಾಖೆಗಳ ಮುಖ್ಯಸ್ಥರುಗಳು ಸಭೆಯಲ್ಲಿ ಭಾಗವಹಿಸಿದ್ದರು

ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ನೇ ಭ ರಾಮಲಿಂಗಶೆಟ್ಟಿ, ಡಾ. ಪದ್ಮಿನಿ ನಾಗರಾಜು ಕೋಶಾಧ್ಯಕ್ಷರಾದ ಬಿ ಎಮ್ ಪಟೇಲ್ ಪಾಂಡು ಮುಂತಾದವರು ಭಾಗವಹಿಸಿದ್ದರು

ಮುಂದೆ ನಡೆಯುವ ಸಾಹಿತ್ಯ ಸಮ್ಮೇಳನದ ಕನ್ನಡದ ಅಕ್ಷರ ಜಾತ್ರೆ ಗೆ ಎಲ್ಲರೂ ಬರಲು ಈಗಲೇ ಸಿದ್ಧತೆ ಮಾಡಿಕೊಳ್ಳಬೇಕು. ಕನ್ನಡ ಸಾಹಿತ್ಯ ಪರಿಷತ್ತು ನಮ್ಮದು ನಿಮ್ಮದು ಎಲ್ಲರದು ಕೂಡ ಹೌದು ಸಮ್ಮೇಳನದ ಯಶಸ್ಸಿಗೆ ನಾವೆಲ್ಲರೂ ಪಣತೊಡೋಣ ಎಂದು ಕಸಾಪ ಅಧ್ಯಕ್ಷರು ಮನವಿ ಮಾಡಿಕೊಂಡಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group