spot_img
spot_img

ಅಂಬೇಡ್ಕರ ಅವರ ವಿಚಾರಗಳು ಅಜರಾಮರವಾಗಿ ಉಳಿಯಲಿವೆ- ಸಂಸದ ಈರಣ್ಣ ಕಡಾಡಿ

Must Read

spot_img
- Advertisement -

ಮೂಡಲಗಿ: ದೇಶದ ಪ್ರತಿಯೊಬ್ಬ ನಾಗರಿಕನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಮಾನ ಅವಕಾಶಗಳನ್ನು ಪಡೆದುಕೊಂಡು ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಬೆಳೆದು ದೇಶದ ಅಭಿವೃದ್ದಿಗಾಗಿ ಸರ್ವರೂ ಕೊಡುಗೆ ನೀಡಬಲ್ಲ ವ್ಯವಸ್ಥೆಯನ್ನು ಜಾರಿಗೆ ತರಲು ಸಂವಿಧಾನವನ್ನು ರಚಿಸಿದ ಧೀಮಂತ ನಾಯಕ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ್ ಅಂಬೇಡ್ಕರ ಅವರು ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಹೇಳಿದರು.

ರವಿವಾರ (ಏ.14) ರಂದು ಕಲ್ಲೋಳಿ ಪಟ್ಟಣದ ಶ್ರೀ ಮಹಾಲಕ್ಷ್ಮಿ ಸೌಹಾರ್ದ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ ಅವರ 133 ನೇ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಡಾ. ಬಿ.ಆರ್. ಅಂಬೇಡ್ಕರ ಅವರು ತಾವು ಜನಿಸಿದ ಕುಟುಂಬದಲ್ಲಿನ ಕೀಳರಿಮೆಯ ಮನಸ್ಥಿತಿ ಮತ್ತು ಬಡತನವನ್ನು ಮೆಟ್ಟಿನಿಂತು ಅಗಾಧವಾದ ಅಧ್ಯಯನದ ಮೂಲಕ ಸಮಾಜದಲ್ಲಿ ಸಮಾನತೆ ಮತ್ತು ಸಾಮರಸ್ಯ ತರುವ ನಿಟ್ಟಿನಲ್ಲಿ ತಮ್ಮ ಬದುಕನ್ನೇ ಸಮರ್ಪಿಸಿದರು ಎಂದರು.

ಅಂಬೇಡ್ಕರರ ಚಿಂತನೆಗಳು ಮತ್ತು ಇಂದಿನ ಭಾರತೀಯ ಜನತಾ ಪಾರ್ಟಿಯ ಚಿಂತನೆಗಳು ಬಹಳಷ್ಟು ಸಾಮ್ಯತೆಯನ್ನು ಹೊಂದಿವೆ. ಅವರ ಚಿಂತನೆಯನ್ನು ಅನುಷ್ಠಾನಗೊಳಿಸಿ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲಿನ ಜೀವನವನ್ನು ಒದಗಿಸಿ ದೇಶದಲ್ಲಿ ಏಕತೆ ಭಾವನೆಯನ್ನು ಮೂಡಿಸುವುದೇ ಭಾರತೀಯ ಜನತಾ ಪಾರ್ಟಿಯ ಕೇಂದ್ರ ಸರ್ಕಾರದ ಆಶಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರಕಾರವು ಡಾ. ಅಂಬೇಡ್ಕರ್ ಅವರ ಜೀವನದಲ್ಲಿನ ಐದು ಪ್ರಮುಖ ಸ್ಥಳಗಳನ್ನು ಪಂಚ ತೀರ್ಥ ಕ್ಷೇತ್ರ ಎಂದು ಘೋಷಿಸಿ ಅಭಿವೃದ್ಧಿ ಪಡಿಸುತ್ತಿರುವುದು ನಮ್ಮ ಪಕ್ಷದ ಆಶಯಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದರು.

- Advertisement -

ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಹಾಗೂ ಸಹಕಾರಿ ನಿರ್ದೇಶಕ ಸತೀಶ ಕಡಾಡಿ, ಪ್ರಧಾನ ವ್ಯವಸ್ಥಾಪಕ ಹಣಮಂತ ಕಲಕುಟ್ರಿ, ಶಾಖಾ ವ್ಯವಸ್ಥಾಪಕ ಪರಪ್ಪ ಗಿರೆಣ್ಣವರ, ಶಂಕರ ಕೌಜಲಗಿ, ಶಿವಾನಂದ ಬಡಿಗೇರ, ದೊಡ್ಡಪ್ಪ ಉಜ್ಜನಕೊಪ್ಪ ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

- Advertisement -
- Advertisement -

Latest News

ದೂರದೃಷ್ಟಿಯ ನಾಯಕ ಎಸ್ ಎಮ್ ಕೃಷ್ಣ

ಸಿಂದಗಿ: ಸರಕಾರ ಆರ್ಥಿಕ ಅವಲಂಬನೆ ಹೆಚ್ಚಾಗಿರೋಕೆ ಮಾಜಿ ಮುಖ್ಯಮಂತ್ರಿ ಎಸ್.ಎಮ್.ಕೃಷ್ಣಾ ಅವರ ದೂರ ದೃಷ್ಟಿಯೇ ಕಾರಣ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು. ಪಟ್ಟಣದ ಬ್ಲಾಕ್ ಕಾಂಗ್ರೆಸ್...
- Advertisement -

More Articles Like This

- Advertisement -
close
error: Content is protected !!
Join WhatsApp Group