spot_img
spot_img

ಅಮೃತ ಮಹೋತ್ಸವ ; 75×9 ಉದ್ದಗಲದ ರಾಷ್ಟ್ರಧ್ವಜ ಕ್ಕೆ ಚಾಲನೆ

Must Read

ಸಿಂದಗಿ: ಪಟ್ಟಣದ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಹಾಗೂ ವಿವಿಧ ಶಾಲಾ-ಕಾಲೇಜುಗಳ ಸಹಯೋಗದಲ್ಲಿ ಸ್ವತಂತ್ರ ಭಾರತ ಅಮೃತ ಮಹೋತ್ಸವ ಅಂಗವಾಗಿ ಹಮ್ಮಿಕೊಂಡ 75 ಮೀ ಉದ್ದದ 9 ಅಡಿ ಅಗಲವಿರುವ ತಿರಂಗಾ ಯಾತ್ರೆಗೆ ಶಾಸಕ ರಮೇಶ ಭೂಸನೂರ ಚಾಲನೆ ನೀಡಿದರು.

ಸುಮಾರು 300 ಅಡಿ ಉದ್ಬ 9 ಅಡಿ ಅಗಲವಿರುವ ತ್ರಿವರ್ಣ ಧ್ವಜ ಹಿಡಿದಿದ್ದ ವಿದ್ಯಾರ್ಥಿಗಳು ಭಾರತ ಮಾತಾ ಕಿ ಜೈ ಹಾಗೂ ವಂದೇ ಮಾತರಂ ಘೋಷಣೆ ಕೂಗಿದರು.

ಪಟ್ಟಣದ ಸಂಗಮೇಶ್ವರ ದೇವಸ್ಥಾನದಿಂದ ಸ್ವಾಮಿ ವಿವೇಕಾನಂದ ವೃತ್ತ, ಜಗದ್ಗುರು ಡಾ ತೋಂಟದಾರ್ಯ ಮಹಾಸ್ವಾಮಿಗಳ ರಸ್ತೆಯ ಮಾರ್ಗವಾಗಿ ಟಿಪ್ಪು ಸುಲ್ತಾನ ವೃತ್ತ, ಡಾ. ಅಂಬೇಡ್ಕರ ವೃತ್ತ, ಸಂಗೋಳ್ಳಿ ರಾಯಣ್ಣ ವೃತ್ತದಿಂದ ಬಸವೇಶ್ವರ ವೃತ್ತದ ವರೆಗೆ ತಲುಪಿತು.

ಈ ಸಂದರ್ಭದಲ್ಲಿ ಶಾಸಕ ರಮೇಶ ಭೂಸನೂರ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತಮ್ಮ ಪ್ರಾಣವನ್ನೇ ಬಲಿದಾನಗೈದ ವೀರರ ಸ್ಮರಣೆಗಾಗಿ ಪಟ್ಟಣದ ಎಲ್ಲ ಪತ್ರಕರ್ತರ ಸಂಘದ ಎಲ್ಲ ಸದಸ್ಯರು ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ತ್ರಿವರ್ಣ ಧ್ವಜದ ಬೃಹತ್ ತಿರಂಗಾ ಯಾತ್ರೆ ಹಮ್ಮಿಕೊಂಡಿದ್ದು ಸ್ವಾಗಾತಾರ್ಹವಾಗಿದೆ. ವಿದ್ಯಾರ್ಥಿ ಶಕ್ತಿ ದೇಶ ಶಕ್ತಿಯಾಗಿರುವುದರಿಂದ ಇಂದಿನ ಯುವ ಪೀಳಿಗೆ ರಾಷ್ಟ್ರಧ್ವಜ, ರಾಷ್ಟ್ರಗೀತೆ ಹಾಗೂ ರಾಷ್ಟ್ರಲಾಂಛನವನ್ನು ಗೌರವಿಸುತ್ತ ಸಂವಿಧಾನದ ಗೌರವವನ್ನು ಎತ್ತಿ ಹಿಡಿಯಬೇಕು ಎಂದರು.

ಪತ್ರಕರ್ತರ ಸಂಘದ ಅಧ್ಯಕ್ಷ ಅನಂದ ಶಾಬಾದಿ ಮಾತನಾಡಿ, ಭಾರತದ ಸ್ವಾತಂತ್ರ್ಯ ಇತಿಹಾಸದ ವಿವಿಧ ಮಜಲುಗಳನ್ನು ತಿಳಿಸಿ ವಿದ್ಯಾರ್ಥಿಗಳು ದೇಶಪ್ರೇಮ ಬೆಳೆಸಿಕೊಳ್ಳಬೇಕು ಎಂದು ಹೇಳುತ್ತ ಈ ಯಾತ್ರೆಯಲ್ಲಿ ಭಾಗವಹಿಸಿದ ವಿವಿಧ ಶಾಲೆಗಳ ಮುಖ್ಯಸ್ಥರಿಗೆ, ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು.

ಊರಿನಮಠದ ಶ್ರೀ ಶಿವಾನಂದ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ಜಿಲ್ಲಾ ಉಪಾದ್ಯಕ್ಷ ಇಂದುಶೇಖರ ಮಣೂರ, ಸೆಲ್ಯೂಟ್ ತಿರಂಗಾ ಸಂಘಟನೆಯ ರಾಜ್ಯ ಅದ್ಯಕ್ಷ ಚಂದ್ರಶೇಖರ ನಾಗರಬೆಟ್ಟ, ಉಪಾಧ್ಯಕ್ಷ ಎಂ.ಎಂ.ಹಂಗರಗಿ, ಅಶೋಕ ಅಲ್ಲಾಪೂರ, ಕಸಾಪ ಅಧ್ಯಕ್ಷ ರಾಜಶೇಖರ ಕೂಚಬಾಳ, ಗೋಲ್ಲಾಳಪ್ಪಗೌಡ ಪಾಟೀಲ, ಎಂ.ಎಸ್.ಮಠ, ಬಿಜೆಪಿ ಮಂಡಲ ಅಧ್ಯಕ್ಷ ಈರಣ್ಣಾ ರಾವೂರ, ಮಾಳು ಹೊಸ್ಸೂರ, ಜಗದೀಶ ಪಾಟೀಲ, ಪತ್ರಕರ್ತರಾದ ಪಂಡಿತ ಯಂಪೂರೆ, ಸಲೀಮಪಟೇಲ ಮರ್ತೂರ, ಗುರು ಬಿದರಿ, ಇಸ್ಮಾಯಿಲ್ ಶೇಖ, ಮಹಾಂತೇಶ ನೂಲಾನವರ, ರವಿ ಮಲ್ಲೇದ, ಗುರು ಮಠ, ಶಾಂತವೀರ ಹಿರೇಮಠ, ಆರೀಫ್ ಅಂತರಗಂಗಿ, ವಿಜಯಕುಮಾರ ಪತ್ತಾರ, ಸೇರಿದಂತೆ ಜ್ಞಾನ ಭಾರತಿ ವಿದ್ಯಾಮಂದಿರದ ಶಾಲೆಯ, ಸಂಗಮೇಶ್ವರ ಫಾರ್ಮಸ್ಸಿ ಕಾಲೇಜು, ಗುರುಕುಲ ಪಪೂ ಕಾಲೇಜು, ಕಾವ್ಯ ಕೋಚಿಂಗ್, ಸರಕಾರಿ ಪಪೂ ಕಾಲೇಜಿನ, ಪ್ರೌಢಶಾಲೆ, ಕಾಲೇಜ್ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

- Advertisement -
- Advertisement -

Latest News

ಗಾಣಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಕಲ್ಲಿನಾಥ ಶ್ರೀ ಆಗ್ರಹ

ಮೂಡಲಗಿ: ಜಗತ್ತಿಗೆ ಬೆಳಕನ್ನು ಕೊಟ್ಟ  ಗಾಣಿಗ ಸಮುದಾಯ ಇಂದು ಗಾಣಗಳು ಬತ್ತಿ ಹೋಗಿ ಯಂತ್ರೋಪಕರಣ ಬಂದಾಗಿನಿಂದ ಮೂಲ ಕಸಬು ಕಳೆದುಕೊಂಡು ಶೋಷನೆಗೆ ಒಳಗಾಗಿರುವದರಿಂದ ಗಾಣಿಗ ಸಮಾಜಕ್ಕೆ...
- Advertisement -

More Articles Like This

- Advertisement -
close
error: Content is protected !!