- Advertisement -
ಮೈಸೂರಿನ ಕುವೆಂಪುನಗರದಲ್ಲಿರುವ ಎಂ.ಎ.ಎಸ್.ವಿ.ಎಸ್. ಗುರುಕುಲ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಅಮೂಲ್ಯ ಜಿ. ಅವರು ೨೦೨೪ನೇ ಸಾಲಿನಲ್ಲಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಬಾಲಕಿಯರ ೬೦ ಕೆಜಿ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಗಳಿಸಿ, ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ
ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಡಿ.ಕನ್ನೀಕರ್, ಉಪಪ್ರಾಂಶುಪಾಲರಾದ ಡಾ.ಬಿ.ಜಿ.ತನುಜ ಹಾಗೂ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಬಿ.ಎಸ್.ಗಿರೀಶ್, ಆಡಳಿತ ಮಂಡಳಿ ಮತ್ತು ಅಧ್ಯಾಪಕ ವೃಂದ ಅಭಿನಂದಿಸಿದೆ.