spot_img
spot_img

ಸಂಸದರ ನಿಧಿಯಿಂದ ಅಂಬ್ಯುಲೆನ್ಸ್ ನೀಡಿದ ಈರಣ್ಣ ಕಡಾಡಿ

Must Read

- Advertisement -

ಗ್ರಾಮಸ್ಥರ ಪ್ರೀತಿ ದೊಡ್ಡದು – ಸಂಸದ ಈರಣ್ಣ ಕಡಾಡಿ

ಬೆಟಗೇರಿ: ಗ್ರಾಮದ ಜನರ ಜೊತೆ ಬಹಳ ವರ್ಷಗಳಿಂದ ನನಗೆ ಅವಿನಾಭಾವ ಸಂಬಂಧವಿದೆ. ಇಲ್ಲಿಯ ಜನರ ಪ್ರೀತಿ, ಅಭಿಮಾನ ಎಲ್ಲಕ್ಕಿಂತ ದೊಡ್ಡದು, ಬೆಟಗೇರಿ ಗ್ರಾಮದ ಸಮಗ್ರ ಅಭಿವೃದ್ಧಿಗೆ ಅವಶ್ಯಕವಾದ ಕಾರ್ಯಗಳನ್ನು ಸರ್ಕಾರದ ವಿವಿಧ ಯೋಜನೆಗಳ ಮೂಲಕ ಹಂತ ಹಂತವಾಗಿ ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು.

ಅರಭಾಂವಿ ಮತಕ್ಷೇತ್ರ ವ್ಯಾಪ್ತಿಯ ಬೆಟಗೇರಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಶನಿವಾರ ಜುಲೈ.17 ರಂದು ನಡೆದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ತಮ್ಮ 2021-22ನೇ ಸಾಲಿನ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯ ಸುಮಾರು 10 ಲಕ್ಷ ರೂ.ಗಳ ಅನುದಾನದಡಿಯಲ್ಲಿ ನೀಡಿರುವ ನೂತನ ಅಂಬ್ಯುಲೆನ್ಸ್ ವಾಹನ ಸಮರ್ಪಿಸಿ, ಹಸಿರು ನಿಶಾನೆ ತೋರಿಸುವ ಮೂಲಕ ವಾಹನ ಓಡಾಟಕ್ಕೆ ಚಾಲನೆ ನೀಡಿ ಮಾತನಾಡಿ, ಸ್ಥಳೀಯ ಪಿಎಚ್‍ಸಿ ವ್ಯಾಪ್ತಿಯ ಸಾರ್ವಜನಿಕರು ಈ ತುರ್ತು ನೂತನ ವಾಹನದ ಸದುಪಯೋಗವನ್ನು ಪಡಿಸಿಕೊಳ್ಳಬೇಕೆಂದರು.

- Advertisement -

ನಾನು ಸಾಮಾನ್ಯ ರೈತ ಕುಟುಂಬದಲ್ಲಿ ಹುಟ್ಟಿ, ಬೆಳೆದವನು. ಬಿಜೆಪಿ ಪಕ್ಷ ನನ್ನನ್ನು ಗುರುತಿಸಿ ರಾಜ್ಯಸಭಾ ಸದಸ್ಯನಾಗಿ ಆಯ್ಕೆ ಮಾಡಿ ತಮ್ಮೆಲ್ಲರ ಸೇವೆ ಮಾಡಲು ಅವಕಾಶ ದೊರಕಿಸಿದೆ. ಸ್ಥಳೀಯ ಶಾಸಕರ ಸಹಯೋಗದೊಂದಿಗೆ ಈ ಭಾಗದ ಅಭಿವೃದ್ಧಿಗೆ, ತಮ್ಮೆಲ್ಲರ ಆಶೋತ್ತರಗಳಿಗೆ ಸ್ಪಂದಿಸಲು ಪ್ರಯತ್ನಿಸುತ್ತೇನೆ ಎಂದು ರಾಜ್ಯ ಸಭಾ ಸದಸ್ಯ ಈರಣ್ಣ ಕಡಾಡಿ ಅವರು ಹೇಳಿದರು.

ಈರಯ್ಯ ಹಿರೇಮಠ, ವಿಜಯ ಹಿರೇಮಠ ಸಾನ್ನಿಧ್ಯ ವಹಿಸಿ ತುರ್ತು ನೂತನ ವಾಹನದ ಪೂಜೆ ನೆರವೇರಿಸಿದರು. ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಗ್ರಾಮ ಪಂಚಾಯತಿ ಹಾಗೂ ವಿವಿಡಿ ಸರ್ಕಾರಿ ಪ್ರೌಢ ಶಾಲೆ ವತಿಯಿಂದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು. ಗ್ರಾಮದ ಅಭಿವೃದ್ಧಿಗೆ ಅವಶ್ಯಕವಾದ ಕೆಲವು ಬೇಡಿಕೆ ಈಡೇರಿಸುವಂತೆ ಈರಣ್ಣ ಕಡಾಡಿ ಅವರಿಗೆ ಈ ವೇಳೆ ಸ್ಥಳೀಯರು ಮನವಿ ಸಲ್ಲಿಸಿದರು.

- Advertisement -

ಗೋಕಾಕ ತಾಲೂಕಾ ವೈದ್ಯಾಧಿಕಾರಿಗಳಾದ ಡಾ.ಮುತ್ತಣ್ಣ ಕೊಪ್ಪದ, ಲಕ್ಷ್ಮಣ ನೀಲಣ್ಣವರ, ಡಾ.ರಾಜೇಶ್ವರಿ ಹಿರೇಮಠ, ಡಾ.ಭುವನೇಶ್ವರಿ ಚೆನ್ನಾಳ, ಬಸವಂತ ಕೋಣಿ, ಲಕ್ಷ್ಮಣ ಚಂದರಗಿ, ಈಶ್ವರ ಮುಧೋಳ, ರಾಮಣ್ಣ ಬಳಿಗಾರ, ಈರಪ್ಪ ದೇಯಣ್ಣವರ, ಈಶ್ವರ ಬಳಿಗಾರ, ಬಸವರಾಜ ಪಣದಿ, ಶ್ರೀಶೈಲ ತುಪ್ಪದ, ಸ್ಥಳೀಯ ಹಾಗೂ ಸುತ್ತಲಿನ ಹಳ್ಳಿಗಳ ರಾಜಕೀಯ ಮುಖಂಡರು, ಗಣ್ಯರು, ವಿವಿಧ ಸಂಘ, ಸಂಸ್ಥೆಗಳ ಅಧ್ಯಕ್ಷರು, ಸದಸ್ಯರು, ವಿವಿಧ ಇಲಾಖೆ ಅಧಿಕಾರಿಗಳು, ಸ್ಥಳೀಯರು ಇದ್ದರು.

- Advertisement -
- Advertisement -

Latest News

ನಮ್ಮ ಊರ ಜಾತ್ರೆಯೊಂದನ್ನು ನಿಮ್ಮ ಬದುಕಿನ ಯಾತ್ರೆಗೆ ಹೋಲಿಸುತ್ತ….

ಹಾಯ್, ಹಲೋ, ನಮಸ್ಕಾರ...ಸ್ನೇಹಿತರೆ ನೀವೆಲ್ಲ ಹೇಗಿದ್ದೀರಿ? ಬಹಳಷ್ಟು ಜನ ಪರವಾಗಿಲ್ಲ ಚೆನ್ನಾಗಿದ್ದೀವಿ ಅಂತೀರಿ ಇನ್ನು ಕೆಲವಷ್ಟು ಜನ ಅಯ್ಯೋ ಅದ್ ಏನ್ ಕೇಳ್ತೀರಾ ಬಿಡಿ ಅನ್ನುವಂತಹ...
- Advertisement -

More Articles Like This

- Advertisement -
close
error: Content is protected !!
Join WhatsApp Group