- Advertisement -
ಹುಬ್ಬಳ್ಳಿ – ಕೊರೋನಾ ಪಾಸಿಟಿವ್ ಆಗಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೃದ್ಧನೋರ್ವ ಕಿಮ್ಸ್ ಆಸ್ಪತ್ರೆಯಲ್ಲಿ ಬಾತ್ ರೂಂ ನಲ್ಲಿ ನೇಣಿಗೆ ಶರಣಾಗಿದ್ದಾನೆ.
ಕಿಮ್ಸ್ ಕೋವಿಡ್ ವಾರ್ಡ್ ನಂ 303 ರಲ್ಲಿ ಕಳೆದ ಕೆಲ ದಿನಗಳಿಂದ ಆತ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದನೆಂಬುದಾಗಿ ತಿಳಿದು ಬಂದಿದೆ.
ಮೃತ ವ್ಯಕ್ತಿ ಸುಮಾರು 78 ವಯಸ್ಸಿನವರಾಗಿದ್ದು, ಹುಬ್ಬಳ್ಳಿಯ ರಣದಮ್ಮ ಕಾಲನಿಯ ನಿವಾಸಿ ಎಂದು ಹೇಳಲಾಗಿದ್ದು, ಹಿಟ್ಟಿನ ಗಿರಣಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದನೆಂದು ಗೊತ್ತಾಗಿದೆ.
- Advertisement -
ಕೊರೋನಾ ಪಾಸಿಟಿವ್ ದೃಢಪಟ್ಟ ನಂತರ, ಚಿಕಿತ್ಸೆಗಾಗಿ ಕಿಮ್ಸಗೆ ದಾಖಲು ಮಾಡಲಾಗಿತ್ತು. ಈ ಸಮಯದಲ್ಲಿ ಮಾನಸಿಕವಾಗಿ ಭಯಗೊಂಡು ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕೆ ವ್ಯಕ್ತಪಡಿಸಲಾಗಿದೆ. ವಿದ್ಯಾನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.