ಫೆ. ೧೯ರಂದು ಅರಭಾವಿ ಆಂಜನೇಯ ಶಾಲೆಯ ವಾರ್ಷಿಕೋತ್ಸವ

Must Read

ಮೂಡಲಗಿ: ತಾಲ್ಲೂಕಿನ ಅರಭಾವಿಯ ಆಂಜನೇಯ ಗ್ರಾಮೀಣ ಶಿಕ್ಷಣ ಸಂಸ್ಥೆಯ ಶ್ರೀ ಆಂಜನೇಯ ಅನುದಾನಿತ ಪೂರ್ವ ಪ್ರಾಥಮಿಕ ಹಾಗೂ ಹಿರಿಯ ಪ್ರಾಥಮಿಕ ಶಾಲೆಯ ೩೩ನೇ ವರ್ಷದ ವಾರ್ಷಿಕೋತ್ಸವ ಹಾಗೂ ೭ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭವು ಫೆ. ೧೯ರಂದು ಸಂಜೆ ೪ಕ್ಕೆ ಶಾಲೆಯ ಆವರಣದಲ್ಲಿ ಜರುಗಲಿದೆ.

ಸಮಾರಂಭದ ಸಾನ್ನಿಧ್ಯವನ್ನು ಜಗದ್ಗುರು ದುರದುಂಡೀಶ್ವರ ಸಿದ್ಧ ಸಂಸ್ಥಾನ ಮಠದ ಪೀಠಾಧಿಪತಿ ಗುರುಬಸವಲಿಂಗ ಸ್ವಾಮೀಜಿ ಮತ್ತು ಶಿವಯ್ಯ ಸ್ವಾಮಿಗಳು ವಹಿಸುವರು.

ಉದ್ಘಾಟನೆಯನ್ನು ಶಾಸಕ ಬಾಲಚಂದ್ರ ಜಾರಕಿಹೊಳಿ ನೆರವೇರಿಸುವರು. ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಶಂಕರಣ್ಣಾ ಬಿಲಕುಂದಿ ವಹಿಸುವರು.

ಶಾಸಕ ರಮೇಶ ಜಾರಕಿಹೊಳಿ, ಸಚಿವ ಸತೀಶ ಜಾರಕಿಹೊಳಿ, ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ, ಸಂಸದೆ ಪ್ರೀಯಾಂಕ ಜಾರಕಿಹೊಳಿ ಭಾಗಹಿಸುವರು.
ಅತಿಥಿ ಉಪನ್ಯಾಸಕರಾಗಿ ಮೂಡಲಗಿಯ ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಭಾಗವಹಿಸುವರು ಎಂದು ಮುಖ್ಯ ಶಿಕ್ಷಕ ಎಂ.ಬಿ. ಜೈನ ತಿಳಿಸಿದ್ದಾರೆ.

Latest News

ಅನ್ನದಾನೇಶ್ವರ ಶ್ರೀಗಳು ಪಂಚಭೂತಗಳಲ್ಲಿ ಲೀನ

ಶ್ರೀಶೈಲ ಜಗದ್ಗುರುಗಳು, ನಾಡಿನ ಹರಗುರು ಚರಮೂರ್ತಿಗಳು ಭಕ್ತರು ಭಾಗಿಮೂಡಲಗಿ - ರಬಕವಿ ಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಶ್ರೀ ಬಸವ ಗೋಪಾಲ ನೀಲಮಾಣಿಕ ಮಠದ ಶ್ರೀ...

More Articles Like This

error: Content is protected !!
Join WhatsApp Group