spot_img
spot_img

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ 93ನೇ ಅನ್ನದಾಸೋಹ

Must Read

- Advertisement -

ಮೂಡಲಗಿ ಲಯನ್ಸ್ ಕ್ಲಬ್ ಪರಿವಾರದಿಂದ 93ನೇ ಅನ್ನದಾಸೋ

ಮೂಡಲಗಿ: ಲಯನ್ಸ್ ಕ್ಲಬ್ ಮೂಡಲಗಿ ಪರಿವಾರದಿಂದ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದ ಒಳ ಮತ್ತು ಹೊರ ರೋಗಿಗಳಿಗೆ 93ನೇ ಪಾಕ್ಷಿಕ ಅನ್ನದಾಸೋಹವನ್ನು ಏರ್ಪಡಿಸಿದ್ದರು.

ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಭಾರತಿ ಕೋಣಿ ಅವರು ಅನ್ನದಾಸೋಹಕ್ಕೆ ಚಾಲನೆ ನೀಡಿ ಮಾತನಾಡಿ, ‘ಅನ್ನದಾನವು ಶ್ರೇಷ್ಠದಾನವಾಗಿದೆ, ಹಸಿದವರಿಗೆ ಅನ್ನ ನೀಡುವುದು ಮಾನವೀಯತೆಯ ಪ್ರತೀಕವಾಗಿದೆ’ ಎಂದರು.

- Advertisement -

ಲಯನ್ಸ್ ಕ್ಲಬ್‍ವು ಪ್ರತಿ ತಿಂಗಳಲ್ಲಿ ಎರಡು ಬಾರಿ ರೋಗಿಗಳಿಗೆ ಅನ್ನದಾಸೋಹ ಮಾಡುತ್ತಿರುವುದು ಶ್ಲಾಘನೀಯ ಕಾರ್ಯವಾಗಿದ್ದು, ಇದು ಇತರ ಸಂಸ್ಥೆಗಳಿಗೆ ಮಾದರಿಯೆನಿಸಿದೆ ಎಂದರು.

ದಿ. ಮಲ್ಲಪ್ಪ ಎಚ್. ಸೋನವಾಲಕರ ಅವರ ದ್ವಿತೀಯ ಪುಣ್ಯಸ್ಮರಣೆಯ ನಿಮಿತ್ತ ಅವರ ಪುತ್ರ ಸಂದೀಪ ಸೋನವಾಲಕರ ಅನ್ನದಾಸೋಹ ಸೇವೆಯನ್ನು ಮಾಡಿದ್ದರು.

ಲಯನ್ಸ್ ಕ್ಲಬ್ ಅಧ್ಯಕ್ಷ ಶ್ರೀಶೈಲ್ ಲೋಕನ್ನವರ ಪ್ರಾಸ್ತಾವಿಕ ಮಾತನಾಡಿ ಪ್ರತಿ ತಿಂಗಳು ಎರಡು ಬಾರಿ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಅನ್ನದಾಸೋಹವನ್ನು ಏರ್ಪಡಿಸಲಾಗುತ್ತಿದೆ ಎಂದರು.

- Advertisement -

400ಕ್ಕೂ ಅಧಿಕ ಸಂಖ್ಯೆಯಲ್ಲಿ ಆಸ್ಪತ್ರೆಯ ಆರೋಗ್ಯ ತಪಾಸಣೆಗೆ ಬಂದಿದ್ದ ಸಾರ್ವಜನಿಕರು ಮತ್ತು ಅವರ ಸಂಬಂಧಿಕರು ಅನ್ನದಾಸೋಹದಲ್ಲಿ ಭಾಗಹಿಸಿದ್ದರು.

ಬಾಲಶೇಖರ ಬಂದಿ ಪ್ರಾಸ್ತಾವಿಕ ಮಾತನಾಡಿದರು.
ಸಂಜಯ ಮೋಕಾಶಿ, ಸಂದೀಪ ಸೋನವಾಲಕರ, ಸುರೇಶ ದೇಸಾಯಿ, ಶಿವಾನಂದ ಗಾಡವಿ, ಪುಲಕೇಶ ಸೋನವಾಲಕರ, ರಾಮಣ್ಣ ಝಂಡೇಕುರಬರ ಇದ್ದರು.

- Advertisement -
- Advertisement -

Latest News

ಮೈಸೂರು ರೋಟರಿ ಐವರಿ ಸಿಟಿ ವತಿಯಿಂದ ಮಾರ್ಗದರ್ಶಕ ಪ್ರಶಸ್ತಿ

ಮೈಸೂರು -ಮೈಸೂರು ನಗರದ ರೋಟರಿ ಐವರಿ ಸಿಟಿ ಅಫ್ ಮೈಸೂರು ವತಿಯಿಂದ ಜಯಲಕ್ಷ್ಮಿ ಪುರಂನ ಸತ್ಯ ಸಾಯಿಬಾಬಾ ಶಿಕ್ಷಣ ಸಂಸ್ಥೆಯ ಗೌರವ ಅಧ್ಯಕ್ಷರಾದ ಪ್ರೊಫೆಸರ್ ಕೆ.ಬಿ.ಪ್ರಭು...
- Advertisement -

More Articles Like This

- Advertisement -
close
error: Content is protected !!
Join WhatsApp Group