ಶ್ರೀಮತಿ ಸೋಮವ್ವ ಚನ್ನಬಸಪ್ಪ ಅಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆ ಕೆ ಕೊಪ್ಪ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರವನ್ನು ಅರಳಿಕಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ಇತ್ತೀಚಿಗೆ ಉದ್ಘಾಟನೆ ಮಾಡಲಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿವೃತ್ತ ಗುರುಗಳಾದ ಎನ್.ಬಿ.ಕಲ್ಯಾಣಿ ಗುರುಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ಇವತ್ತಿನ ಸಮಾಜದಲ್ಲಿ ಎನ್ಎಸ್ಎಸ್ ಶಿಬಿರದ ಮಹತ್ವ ಬಹಳ ಇದೆ. ಯುವಕರು ಗ್ರಾಮೀಣಾಭಿವೃದ್ಧಿಯಲ್ಲಿ ಶ್ರಮಿಸಬೇಕು. ರೈತರಿಗೆ, ಮಹಿಳೆಯರಿಗೆ, ಮಕ್ಕಳಿಗೆ ಗ್ರಾಮ ನೈರ್ಮಲ್ಯ, ಆರೋಗ್ಯದ ತಿಳಿವಳಿಕೆ ಹಾಗೂ ಪರಿಸರ ಮಾಲಿನ್ಯದ ಬಗ್ಗೆ ಜನರಿಗೆ ತಿಳಿಸಬೇಕಾದ ಬಹುದೊಡ್ಡ ಜವಾಬ್ದಾರಿ ನಮ್ಮ ಯುವ ಸಮೂಹದ ಮೇಲಿದೆ. ಕಾಲೇಜು ವಿದ್ಯಾರ್ಥಿಗಳಾದ ನೀವು ಈ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಿದರೆ ದೇಶದ ಅಭಿವೃದ್ಧಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಮಹಾವಿದ್ಯಾಲಯದ ಪ್ರಾಚಾರ್ಯರು ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕರಾದ ಡಾ. ಕಿರಣಕುಮಾರ ದೇಸಾಯಿ ಡಾ. ಭಾಗ್ಯಶ್ರೀ ಪಟ್ಟಣಶೆಟ್ಟಿ ಮನೋಹರ ಜಂಗಳಿ ದುಂಡಪ್ಪ ಮೂಲಿಮನಿ ಹಾಗೂ ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಬಸವರಾಜ ಹುಲಮನಿ ಉಪಸ್ಥಿತರಿದ್ದರು.