ಬಸವಕಲ್ಯಾಣದಲ್ಲಿ ಶೀಘ್ರದಲ್ಲೇ ಅನುಭವ ಮಂಟಪ

Must Read

ಬೀದರ – ಶೀಘ್ರದಲ್ಲೇ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ಕಾಮಗಾರಿ ಆರಂಭ ಮಾಡಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಚವ್ಹಾಣ್ ಭರವಸೆ ನೀಡಿದ್ದಾರೆ.

ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಬೀದರ್ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್ ಜೊತೆ ವರ್ಚುವಲ್ ಸಭೆ ನಡೆಸಿದ್ದರು. ಈ ವೇಳೆ ಸಭೆಯಲ್ಲಿ ಭಾಗಿಯಾಗಿದ್ದ ಸಚಿವ ಪ್ರಭು ಚವ್ಹಾಣ್ ಕಲ್ಯಾಣ ಕರ್ನಾಟಕ ಭಾಗದ ಬೀದರ್ ಜಿಲ್ಲೆಯ ಸಮಗ್ರ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.

ಕಳೆದ ಮೂರ್ನಾಲ್ಕು ತಿಂಗಳ ಹಿಂದೆ ಬಸವಕಲ್ಯಾಣದಲ್ಲಿ ನೂತನ ಅನುಭವ ಮಂಟಪ ಕಾಮಗಾರಿಗೆ ಸಿಎಂ ಬಿಎಸ್ ವೈ ಶಂಕುಸ್ಥಾಪನೆ ಮಾಡಿದ್ದು, ಈಗಾಗಲೇ 200 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಸದ್ಯ ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗಿದ್ದರಿಂದ ಕಾಮಗಾರಿಗೆ ವಿಳಂಬವಾಗಿದ್ದು ಮುಂದಿನ ಎರಡು ತಿಂಗಳಲ್ಲಿ ಕಾಮಗಾರಿ ಆರಂಭಮಾಡುವುದಾಗಿ ಭರವಸೆ ನೀಡಿದರು.

ಬಳಿಕ ಬಸವಕಲ್ಯಾಣ ನಗರದ ತಾಲ್ಲೂಕು ಪಂಚಾಯಿತಿಯ ಸಭಾಂಗಣದಲ್ಲಿ ಸಚಿವರಾದ ಪ್ರಭು ಚವ್ಹಾಣ ಅವರು ತಾಲ್ಲೂಕಿನ ಅಧಿಕಾರಿಗಳ ಜೊತೆ ಸಭೆ ನಡೆಸಿ ಬಸವಕಲ್ಯಾಣದ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group