ಉಚಿತ ಸ್ಪರ್ಧಾತ್ಮಕ ತರಬೇತಿಗೆ ಅರ್ಜಿ ಆಹ್ವಾನ

Must Read

ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ ಅರಭಾಂವಿ ಮತ ಕ್ಷೇತ್ರದ ವ್ಯಾಪ್ತಿಯಲ್ಲಿನ ಸ್ಪರ್ಧಾತ್ಮಕ ಪರೀಕ್ಷೆ ವಿದ್ಯಾರ್ಥಿಗಳಿಗಾಗಿ  ಉಚಿತವಾಗಿ ಕಹಾಮ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಸ್ಪರ್ಧಾ ವಿವೇಕ ಸಂಸ್ಥೆಯಿoದ ಸುಮಾರು ಎರಡು ನೂರುಕ್ಕು  ಹೆಚ್ಚು ವಿದ್ಯಾರ್ಥಿಗಳಿಗೆ ವಿವಿಧ ಹುದ್ದೆಗಳ ಉಚಿತ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಮೂರು ತಿಂಗಳ ಕಾಲ ತರಬೇತಿ ನೀಡಲಾಗುವುದು, ಆಸ್ತಕ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಸ್ಪರ್ಧಾ ವಿವೇಕ ಸಂಸ್ಥೆಯ ನಿರ್ದೇಶಕ ರವಿ ಕಂಟಿಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿಯೊಂದು ವಿಷಯವನ್ನು ಅನುಭವಿ ಉಪನ್ಯಾಸಕರಿಂದ ಮೂರು ತಿಂಗಳ ಕಾಲ ಕೆಎಎಸ್, ಪಿಎಸ್‌ಐ, ಎಫ್‌ಡಿಎ, ಎಸ್‌ಡಿಎ, ಪಿಡಿಒ, ಪೋಲೀಸ್ ಎಸ್.ಎಸ್.ಸಿ ಹುದ್ದೆಯ ಪರೀಕ್ಷೆಯ ಉಚಿತ ತರಬೇತಿ ನೀಡಲಾಗುವುದು, ಪ್ರತಿ ಭಾನುವಾರ ಉಚಿತ ಸ್ಪರ್ಧಾತ್ಮಕ ಮಾದರಿ ಪರೀಕ್ಷೆ, ಪಿ.ಸಿ ಮತ್ತು ಪಿಎಸ್‌ಐ ಸಂಬಂದಿಸಿದ ದೈಹಿಕ ಪರೀಕ್ಷೆ ನಡೆಸಲಾಗುವುದು. ಆಸಕ್ತರು ಮೊ.೮೧೯೭೬೮೯೭೭೭ ಮತ್ತು ೮೯೭೧೭೯೭೬೧೪ ಕ್ಕೆ ಸಂಪರ್ಕಿಸಿ ಹೆಸರು ನೊಂದಾಯಿಸ ಬಹುದು ಎಂದು ಸಂಸ್ಥೆಯ ನಿರ್ದೇಶಕ ರವಿ ಕಂಟಿಕಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest News

ಸಾಹಿತ್ಯಕ್ಕೆ ಬದುಕು ಬದಲಿಸುವ ಶಕ್ತಿಯಿದೆ: ಡಾ.ಸುನಂದಾ

ಜಮಖಂಡಿ: ಸೃಜನಶೀಲ ಸಾಹಿತ್ಯಕ್ಕೆ ನಾಡು ಕಟ್ಟುವ ಮತ್ತು ನಾಡಿನ ಜನರ ಬದುಕು ಬದಲಿಸುವ ಶಕ್ತಿಯಿದೆ. ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ದಿಸೆಯಲ್ಲಿ ಕೊಕ್ಕನವರ ಅಕಾಡೆಮಿ...

More Articles Like This

error: Content is protected !!
Join WhatsApp Group